ಡಿಕೆಶಿ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಸಿಪಿ ಯೋಗೇಶ್ವರ್: ಚನ್ನಪಟ್ಟಣ ಟಿಕೆಟ್ ಫಿಕ್ಸ್!

ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಇಬ್ಬರೂ ನಾಯಕರಿಗೆ ಪ್ರತಿಷ್ಠೆಯ ಅಖಾಡವಾಗಿರುವ ಚನ್ನಪಟ್ಟಣ ಉಪ ಚುನಾವಣೆ ಟಿಕೆಟ್‌ ಗೊಂದಲ ಬಹುತೇಕ ಫೈನಲ್ ಆದಂತೆ ಕಣುತ್ತಿದೆ.

ಹೌದು, ಕುಮಾರಸ್ವಾಮಿ ಕ್ಷೇತ್ರವಾದ ಚನ್ನಪಟ್ಟಣವನ್ನು ಬಿಜೆಪಿಗೆ ಬಿಟ್ಟುಕೊಡದ ಹಿನ್ನೆಲೇ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಲು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಅವರ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಸಹ ಭೇಟಿಯಾಗಿದ್ದು, ಕಾಂಗ್ರೆಸ್ ಸೇರ್ಪಡೆ ಬಹುತೇಕ ಪಕ್ಕ ಆಗಿದೆ.

ಚನ್ನಪಟ್ಟಣ ಕ್ಷೇತ್ರದ ಆಕಾಂಕ್ಷಿಯಾಗಿರುವ ಮಾಜಿ ಸಚಿವ ಸಿಪಿ ಯೋಗೇಶ್ವರ್‌ ಅವರಿಗೆ ಟಿಕೆಟ್ ಕೊಡಲು ನಿರಾಕರಿಸಿರುವ ಕುಮಾರಸ್ವಾಮಿಗೆ ಟಕ್ಕರ್ ಕೊಡಲು ಕಾಂಗ್ರೆಸ್ ಎಲ್ಲಾ ತಯಾರಿ ಮಾಡಿಕೊಂಡಿದೆ.

ಮಂಗಳವಾರ ತಡರಾತ್ರಿ ಎರಡು ಸಲ ಮನೆಯಿಂದ ರಹಸ್ಯ ಸ್ಥಳಕ್ಕೆ ಹೋಗಿ ಯೋಗೀಶ್ವರ್ ಚರ್ಚಿಸಿದ್ದರು. ಮಧ್ಯರಾತ್ರಿ ಖಾಸಗಿ ಹೊಟೇಲಿನಲ್ಲಿ ಡಿಕೆಶಿಯನ್ನು ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

More articles

Latest article

Most read