ಡಿಕೆಶಿ ನಿಯೋಗದಿಂದ ಕೇಂದ್ರ ನಾಗರಿಕ ವಿಮಾನಯಾನ ಸಚಿವರೊಂದಿಗೆ ಮಹತ್ವದ ಚರ್ಚೆ

ಸಿಲಿಕಾನ್ ಸಿಟಿ ಬೆಂಗಳೂರಿನ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ್ದು ಎನ್ನಲಾದ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬಹುನಿರೀಕ್ಷಿತ ಸ್ಕೈಡೆಕ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಮುಂದಡಿ ಇಟ್ಟಿದೆ. ನವದೆಹಲಿಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮಮೋಹನ್ ನಾಯ್ಡು ಅವರನ್ನು ಬುಧವಾರ ಭೇಟಿ ಮಾಡಿದ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ನಿಯೋಗವು ಈ ಎರಡೂ ಬೃಹತ್ ಯೋಜನೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿತು. ಈ ಸಂದರ್ಭದಲ್ಲಿ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣದ ಪ್ರಕ್ರಿಯೆಯನ್ನು ವೇಗಗೊಳಿಸುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದ ಉಪಮುಖ್ಯಮಂತ್ರಿಗಳು, ನಗರದ ಪ್ರವಾಸೋದ್ಯಮಕ್ಕೆ ಹೊಸ ಕಳೆ ನೀಡಬಲ್ಲ ಸ್ಕೈಡೆಕ್ ಯೋಜನೆಗೆ ಶೀಘ್ರವಾಗಿ ತಾಂತ್ರಿಕ ಅನುಮೋದನೆ ನೀಡುವಂತೆ ಕೋರಿದರು.

ಕರ್ನಾಟಕದ ಕ್ಷಿಪ್ರ ಬೆಳವಣಿಗೆ ಮತ್ತು ಭವಿಷ್ಯದ ಮೂಲಸೌಕರ್ಯ ಅಗತ್ಯಗಳನ್ನು ಪೂರೈಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಬಲವಾದ ಸಮನ್ವಯದ ಅಗತ್ಯವಿದ್ದು, ಯೋಜನೆಗಳಿಗೆ ಕಾಲಮಿತಿಯೊಳಗೆ ಅನುಮತಿ ನೀಡಬೇಕು ಎಂದು ಸಭೆಯಲ್ಲಿ ಒತ್ತು ನೀಡಲಾಯಿತು. ರಾಜ್ಯದ ವಿಮಾನಯಾನ ವಲಯಕ್ಕೆ ಸಂಬಂಧಿಸಿದ ಇತರ ಪ್ರಮುಖ ಮೂಲಸೌಕರ್ಯ ಮತ್ತು ವಿಮಾನಯಾನ ಸಂಪರ್ಕಕ್ಕೆ ಸಂಬಂಧಿಸಿದ ಗಂಭೀರ ವಿಷಯಗಳೂ ಈ ಉನ್ನತ ಮಟ್ಟದ ಭೇಟಿಯಲ್ಲಿ ಚರ್ಚಿತವಾದವು.

More articles

Latest article

Most read