ದೇಶದಲ್ಲಿ ಭೀಕರ ಬರ ಪರಿಸ್ಥಿತಿ, ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ : ಸಿಎಂ ಡಿ.ಕೆ ಶಿವಕುಮಾರ್ ಕರೆ

ಬೆಂಗಳೂರು : “ಈ ವರ್ಷ ದೇಶದಲ್ಲಿ ಭೀಕರ ಬರಗಾಲ ಎದುರಾಗುವ ಮುನ್ಸೂಚನೆ ಇದೆ. ರಾಜ್ಯದ ಬಹುತೇಕ ಅಣೆಕಟ್ಟುಗಳಲ್ಲಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಹೀಗಾಗಿ ರೈತರು ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಕರೆ ನೀಡಿದರು.

ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದರು.

“ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗುತ್ತಿದ್ದು, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ತುಂಗಭದ್ರಾ, ಘಟ್ಟಪ್ರಭಾ, ಮಲಪ್ರಭಾ, ನಾರಾಯಣಪುರ, ವಾಣಿವಿಲಾಸ ಅಣೆಕಟ್ಟುಗಳ ಒಳಹರಿವಿನ ಪ್ರಮಾಣ ಶೂನ್ಯವಾಗಿದೆ. ಕಾವೇರಿ ಪಾತ್ರದಲ್ಲಿ ಮಳೆ ಪ್ರಮಾಣ ಕುಸಿದಿದೆ. ಕಳೆದ ವರ್ಷ ಈ ಸಮಯದಲ್ಲಿ ಹೇಮಾವತಿಯಲ್ಲಿ 80 ಅಡಿ ಇತ್ತು, ಈ ವರ್ಷ 40 ಅಡಿಗೆ ಕುಸಿದಿದೆ. ಕೆಆರ್ ಎಸ್ ನಲ್ಲಿ 100 ಅಡಿ ಇದ್ದ ನೀರಿನ ಪ್ರಮಾಣ ಈಗ 22 ಅಡಿಯಷ್ಟಿದೆ, ಕಬಿನಿಯಲ್ಲಿ 79 ಅಡಿ ಇತ್ತು, ಈಗ 26 ಅಡಿಯಷ್ಟಿದೆ. ಈ ಅಣೆಕಟ್ಟುಗಳಲ್ಲಿ ಒಳಹರಿವಿನ ಪ್ರಮಾಣ 20%ಗೆ ಕುಸಿದಿದೆ. ಹೀಗಾಗಿ ಸಮಸ್ಯೆ ಹೆಚ್ಚುವ ಸಾಧ್ಯತೆ ಇದೆ” ಎಂದು ವಿವರಿಸಿದರು.

“ನೀರು ಬಿಡುವ ವಿಚಾರದಲ್ಲಿ ರೈತರು ಒತ್ತಡ ಹಾಕಬೇಡಿ. ಮುಂದಿನ ದಿನಗಳಲ್ಲಿ ಮಳೆ ಗಮನದಲ್ಲಿಟ್ಟುಕೊಂಡು ಬೆಳೆ ಹಾಕಿ. ಮಳೆ ಬಂದರೆ ನಾವು ನೀರನ್ನು ಒದಗಿಸಿಕೊಡುತ್ತೇವೆ. ಸಚಿವರುಗಳಿಗೆ 2-3 ಜಿಲ್ಲೆಗಳ ಉಸ್ತುವಾರಿ ವಹಿಸಲಾಗಿದ್ದು, ನಾನು ನಾಲ್ಕು ವಿಭಾಗಗಳಿಗೆ ತೆರಳಿ ಪರಿಶೀಲನೆ ಮಾಡುತ್ತೇನೆ. ಪ್ರಧಾನ ಮಂತ್ರಿಗಳು ಈಗಾಗಲೇ ನೀರು ಹಾಗೂ ವಿದ್ಯುತ್ ವಿಚಾರವಾಗಿ ಎಚ್ಚರಿಕೆ ನೀಡಿದ್ದಾರೆ. ದೇಶದಲ್ಲೇ ಭೀಕರ ಬರಗಾಲ ಬರಲಿದೆ ಎಂದು ಕೇಂದ್ರ ಸರ್ಕಾರ ಸಂದೇಶ ನೀಡಿದೆ. ವಿದ್ಯುತ್ ವಿಚಾರವಾಗಿ ಇಂಧನ ಇಲಾಖೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ನಾವು ಈ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರಬೇಕು. ಮೇವು ಹಾಗೂ ಕುಡಿಯುವ ನೀರಿನ ವಿಚಾರವಾಗಿ ಜಿಲ್ಲಾ ಸಚಿವರಿಗೆ ಪ್ರವಾಸ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ತುರ್ತಾಗಿ ಕೊಳವೆ ಬಾವಿ ಕೊರೆಯಲು ಸೂಚಿಸಲಾಗಿದೆ. ನಾನು ಕೂಡ ನಾಲ್ಕು ವಿಭಾಗಕ್ಕೆ ಪ್ರವಾಸ ಮಾಡಲಿದ್ದು, ನಂತರ ಜಿಲ್ಲಾ ಕೇಂದ್ರಗಳಿಗೆ ತೆರಳುತ್ತೇನೆ” ಎಂದು ಕರೆ ನೀಡಿದರು.

ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಹಾಕಲು ಆ.15ರವರೆಗೆ ಅವಕಾಶ:

“ಒಸಿ ಸಿಸಿ ಸಂಬಂಧಿಸಿದಂತೆ ವಿನಾಯಿತಿ ನೀಡಬೇಕು ಎಂದು ರಾಜ್ಯದ ಎಲ್ಲಾ ಕಡೆಗಳಿಂದ ಮನವಿ ಬಂದಿತ್ತು. ಇದಕ್ಕೆ ನಾವು ಅವಕಾಶ ಕಲ್ಪಿಸಿದ್ದೆವು. ಆದರೆ ಕೆಲವರು ನಾವು ಕಟ್ಟಡ ನಿರ್ಮಾಣ ಮಾಡಿದ್ದು, ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಹಾಕಿಲ್ಲ ಎಂದು ಮನವಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ, ಯಾರೆಲ್ಲಾ ವಸತಿ ಕಟ್ಟಡ ನಿರ್ಮಾಣ ಮಾಡಿದ್ದಾರೆ, ಅವರ ದಾಖಲೆ, ಫೋಟೋಗಳೊಂದಿಗೆ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಹಾಕಲು ಆಗಸ್ಟ್ 15ರವರೆಗೆ ಅವಕಾಶ ಕಲ್ಪಿಸಿದ್ದೇವೆ” ಎಂದು ತಿಳಿಸಿದರು.

ವಾಣಿಜ್ಯ ಕಟ್ಟಡಗಳಿಗೂ ವಿನಾಯಿತಿ ನೀಡಿ ಎಂಬ ಬೇಡಿಕೆ ಬಗ್ಗೆ ಕೇಳಿದಾಗ, “ಬೇಕಾದಷ್ಟು ಬೇಡಿಕೆಗಳು ಇರುತ್ತವೆ. ಆದರೆ ನಾನು ಸುಪ್ರೀಂ ಕೋರ್ಟ್ ಆದೇಶವನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕಲ್ಲವೇ” ಎಂದು ತಿಳಿಸಿದರು.

ತಿಂಗಳಿಗೆ 2 ದಿನ ವಿಧಾನಸಭಾ ಕ್ಷೇತ್ರಗಳಲ್ಲಿ ಜನಸ್ಪಂದನ ಕಾರ್ಯಕ್ರಮ

“ಜನರ ಸಮಸ್ಯೆ ಆಲಿಸಲು ಪ್ರಜಾಸೇವೆ ಎಂಬ ಪ್ರತ್ಯೇಕ ಸಚಿವಾಲಯ ರೂಪಿಸುತ್ತಿದ್ದು, ಸಚಿವರಿಗೆ ಇದರ ಜವಾಬ್ದಾರಿ ವಹಿಸಲಾಗುವುದು. ಯಾರ ದೂರೇ ಇರಲಿ, ಸಮಸ್ಯೆ ಇರಲಿ, ಪ್ರತಿಭಟನೆ ಮಾಡುವವರು ತಮ್ಮ ನೋವು ಹೇಳಿಕೊಳ್ಳಲು ಹಾಗೂ ಅವರ ಸಮಸ್ಯೆ ಬಗೆಹರಿಸಲು ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ಹಾಗೂ ಜಿಲ್ಲಾ ಸಚಿವರಿಗೆ ಆ ವಿಚಾರ ತಲುಪಿಸಲು ಈ ಇಲಾಖೆ ಕಾರ್ಯನಿರ್ವಹಿಸಲಿದೆ. ಇದಕ್ಕೆ ಐಎಎಸ್ ಅಧಿಕಾರಿಯನ್ನು ಕಾರ್ಯದರ್ಶಿಯಾಗಿ ನೇಮಿಸುತ್ತಿದ್ದು, ಅಗತ್ಯ ಅಧಿಕಾರಿಗಳನ್ನು ನೀಡಲು ಇಂದು ತೀರ್ಮಾನಿಸಲಾಗಿದೆ. ಎಲ್ಲೇ ಪ್ರತಿಭಟನೆ ನಡೆದರೂ ಅವರ ಅರ್ಜಿ ಸ್ವೀಕರಿಸಿ ಕಾನೂನುಬದ್ಧವಾಗಿ ಸಹಾಯ ಮಾಡಲು ಅವಕಾಶವಿದ್ದರೆ ನಾವು ಕಾರ್ಯನಿರ್ವಹಿಸುತ್ತೇವೆ” ಎಂದು ತಿಳಿಸಿದರು.

“ಪ್ರತಿ ಜಿಲ್ಲಾ ಉಸ್ತುವಾರಿ ಸಚಿವರು ಕಡ್ಡಾಯವಾಗಿ ತಿಂಗಳಿಗೆ 2 ದಿನ (ಮೊದಲ ಹಾಗೂ ಮೂರನೇ ಶನಿವಾರದಂದು) 2 ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಈ ಪ್ರಜಾಸೇವೆ ಅಭಿಯಾನದಲ್ಲಿ ಭಾಗವಹಿಸಬೇಕು. ಎಲ್ಲಾ ಇಲಾಖೆಗಳ ಶಾಖೆಗಳು ಅಲ್ಲಿ ತೆರೆಯಲಾಗುವುದು. ಆ ಜಿಲ್ಲೆಗೆ ಸಂಬಂಧಿಸಿದ ಅಧಿಕಾರಿಗಳು ಅಲ್ಲಿ ಉಪಸ್ಥಿತರಿರಬೇಕು. ಆ ಭಾಗದ ಜನರಿಗೆ ಈ ಸಭೆ ಕುರಿತು ಮುಂಚಿತವಾಗಿ ಮಾಹಿತಿ ನೀಡಲಾಗುವುದು. ಸರ್ಕಾರವೇ ಜನರ ಮನೆ ಬಾಗಿಲಿಗೆ ಹೋಗುವಂತಾಗಬೇಕು. ನಾನು ಕೂಡ ಕೆಲವು ತಾಲ್ಲೂಕುಗಳಿಗೆ ಮಧ್ಯೆ ಮಧ್ಯೆ ಭೇಟಿ ಮಾಡುತ್ತೇನೆ” ಎಂದು ತಿಳಿಸಿದರು.

ಖಾಸಗೀಕರಣವನ್ನು ವಿರೋಧಿಸಿ ಕೆಇಆರ್ ಸಿಗೆ ಆಕ್ಷೇಪಣೆ ಸಲ್ಲಿಸಲು ಎಸ್ಕಾಂಗಳಿಗೆ ಸೂಚನೆ:

“ವಿದ್ಯುತ್ ವಿತರಣೆಯನ್ನು ಖಾಸಗಿಯವರಿಗೆ ನೀಡುವ ವಿಚಾರವಾಗಿ ಎಲ್ಲಾ ಎಸ್ಕಾಂಗಳು ತಮ್ಮ ಆಕ್ಷೇಪಣೆಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ತಿಳಿಸಿದ್ದೇನೆ. ಹಿಂದೆ ಬಿಜೆಪಿ ಸರ್ಕಾರ ಖಾಸಗಿಯವರಿಗೆ ಪರವಾನಿಗೆ ಪಡೆಯಲು ಅವಕಾಶ ನೀಡಿತ್ತು. ಅದರ ಆಧಾರದ ಮೇಲೆ ಟಾಟಾ ಸಂಸ್ಥೆಯವರು ಅರ್ಜಿ ಹಾಕಿದ್ದಾರೆ. ಕೆಇಆರ್ ಸಿ ಅವರು ಈ ಬಗ್ಗೆ ತೀರ್ಮಾನ ಮಾಡಲಿದೆ. ನಮ್ಮ ಸರ್ಕಾರದ ತೀರ್ಮಾನವನ್ನು ಎಸ್ಕಾಂಗಳಿಗೆ ತಿಳಿಸಲಾಗಿದೆ. ಖಾಸಗಿಯವರು ಸರ್ಕಾರಕ್ಕೆ ಅರ್ಜಿ ಹಾಕಿಲ್ಲ. ಕೆಇಆರ್ ಸಿಗೆ ಅರ್ಜಿ ಹಾಕಿದ್ದಾರೆ. ಕೆಇಆರ್ ಸಿ ಅವರು ಎಸ್ಕಾಂಗಳಿಗೆ ತಿಳಿಸಿದ್ದು, ಎಸ್ಕಾಂಗಳು ನಮ್ಮ ಬಳಿ ಚರ್ಚೆ ಮಾಡಿರುವ ಹಿನ್ನೆಲೆಯಲ್ಲಿ ಇದಕ್ಕೆ ನಮ್ಮ ಸಹಮತವಿಲ್ಲ ಎಂದು ತಿಳಿಸಿ ಎಂದು ಎಸ್ಕಾಂಗಳಿಗೆ ಸೂಚಿಸಿದ್ದೇನೆ” ಎಂದು ತಿಳಿಸಿದರು.

ಗ್ರಾಮ್ ಜಿ ಯೋಜನೆಯಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ 3,806 ಕೋಟಿ ಹೊರೆ:

“ಕೇಂದ್ರ ಸರ್ಕಾರದ ಗ್ರಾಮ್ ಜಿ ಯೋಜನೆ ವಿರುದ್ಧ ನಾವು ಹೋರಾಟ ಮಾಡಿದ್ದು, ನ್ಯಾಯಾಲಯದ ಮೆಟ್ಟಿಲು ಏರಿದ್ದೇವೆ. ಯೋಜನೆಯಲ್ಲಿ 40% ವೆಚ್ಚ ಭರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದು, ನಾವು ಷರತ್ತಿನ ಆಧಾರದ ಮೇಲೆ ಯೋಜನೆ ಜಾರಿ ಮಾಡಬೇಕಾಗಿದೆ. ನಮ್ಮ ರಾಜ್ಯಕ್ಕೆ ಇದರಿಂದ ವಾರ್ಷಿಕ 3,806 ಕೋಟಿ ವೆಚ್ಚ ಬೀಳಲಿದೆ. ಎಲ್ಲೆಲ್ಲಿ ಈ ಕೆಲಸ ಕೈಗೊಳ್ಳಬೇಕು ಎಂದು ಇವತ್ತಿನಿಂದ ಅಧಿಸೂಚನೆ ಹೊರಡಿಸಲಾಗುತ್ತಿದೆ” ಎಂದು ಮಾಹಿತಿ ನೀಡಿದರು.

“ಪಂಚಾಯಿತಿಗಳಲ್ಲೂ ದಾಖಲೆ ಶುದ್ಧೀಕರಣಕ್ಕೆ ಭೂಗ್ಯಾರಂಟಿ ನೀಡಲಾಗುತ್ತಿದೆ. ಹೀಗಾಗಿ ಎಲ್ಲಾ ರಸ್ತೆಗಳನ್ನು ಸರ್ಕಾರಿ ರಸ್ತೆಗಳಾಗಿ ಘೋಷಿಸಲು ತೀರ್ಮಾನ ಮಾಡಲಾಗಿದೆ. ಇದಕ್ಕಾಗಿ ಕಾನೂನು ಅವಕಾಶ ಮಾಡಿಕೊಡುತ್ತೇವೆ” ಎಂದರು.

ಸಂಪುಟದಲ್ಲಿ ಕೈಗೊಂಡ ಇತರ ಪ್ರಮುಖ ನಿರ್ಣಯಗಳು:

• ರಾಷ್ಟ್ರೀಯ ಅಂಧತ್ವ ನಿಯಂತ್ರಣದಿಂದ ಸಣ್ಣ ಮಕ್ಕಳಲ್ಲಿ ದೃಷ್ಟಿ ಆರೈಕೆ ಬಲಪಡಿಸಲು 26 ಕೋಟಿ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ.

• ಬಾಗಲಕೋಟೆಯ ಬಿಳಗಿ ತಾಲ್ಲೂಕಿನಲ್ಲಿ ಕೃಷ್ಣಾ ನದಿಯಿಂದ 7 ಸಾವಿರ ಎಕರೆ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸಲು ಬಿಳಗಿ ಏತ ನೀರಾವರಿ ಯೋಜನೆಗೆ 98.50 ಕೋಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

• ಕಲಬುರ್ಗಿಯಲ್ಲಿ ವಾಣಿಜ್ಯ ಹಾಗೂ ಕೈಗಾರಿಕೆ ಇಲಾಖೆಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜಂಟಿ ಸಹಕಾರದಲ್ಲಿ ಜವಳಿ ಪಾರ್ಕ್ ನಿರ್ಮಾಣಕ್ಕೆ ಕೆಐಎಡಿಬಿ ವತಿಯಿಂದ 700 ಕೋಟಿ ವೆಚ್ಚದ ಯೋಜನೆಗೆ ಮೊದಲ ಹಂತಕ್ಕೆ 320 ಕೋಟಿಗೆ ಅನುಮೋದನೆ ನೀಡಲಾಗಿದೆ.

• ಎನ್ ಜಿಎಫ್ ನಲ್ಲಿ 60 ಎಕರೆ ಜಾಗದಲ್ಲಿ ಟ್ರೀ ಪಾರ್ಕ್ ನಿರ್ಮಾಣಕ್ಕೆ 26 ಕೋಟಿ ಅನುದಾನ ಮೀಸಲಿಡಲು ತೀರ್ಮಾನ.

• ಅಲ್ಪಸಂಖ್ಯಾತರ ಇಲಾಖೆಯಿಂದ ಕ್ರೀಡಾ ಉಡುಪು, ವಿದ್ಯಾರ್ಥಿ ಸಾಮಾಗ್ರಿ ವಿತರಣೆಗೆ 33 ಕೋಟಿ ಅನುದಾನಕ್ಕೆ ಅನುಮೋದನೆ.

• ವಾಣಿಜ್ಯ ಹಾಗೂ ಕೈಗಾರಿಕ ಇಲಾಖೆ ದೇವನಹಳ್ಳಿಯಲ್ಲಿ ಏರೋಸ್ಪೇಸ್ ಪಾರ್ಕ್ ನಲ್ಲಿ ಕಾಮನ್ ಫೆಸಿಲಿಟ್ ಸೆಂಟರ್ ಮಾಡಲು 30 ಕೋಟಿ ಅನುದಾನ ನೀಡಲು ಕೆಐಎಡಿಬಿಗೆ ಅನುಮತಿ ನೀಡಲಾಗಿದೆ.

• ವಿಕಲಚೇತನ ಹಕ್ಕು ಕಾಯ್ದೆ ಅನ್ವಯ ಕೆಐಎಡಿಬಿಯಲ್ಲಿ 5% ಭೂ ಮೀಸಲಾತಿ ರಿಯಾಯಿತಿ ಬಗ್ಗೆ ಕಾನೂನು ತರಲಾಗಿತ್ತು. ಈಗ ಅವರಿಗೆ ಎರಡು ಆಯ್ಕೆ ನೀಡಿದ್ದು, ಭೂಮಿ ಮೌಲ್ಯದ 10% ಅಥವಾ ಗರಿಷ್ಠ 20 ಲಕ್ಷದವರೆಗೆ ರಿಯಾಯಿತಿ ನೀಡಲು ಮಿತಿ ಹಾಕಲಾಗಿದೆ.

More articles

Latest article

Most read