ಬೆಂಗಳೂರು : ನಾನೊಬ್ಬ ರೈತನ ಮಗ, ನಮ್ಮದೂ ದೊಡ್ಡ ಚರಿತ್ರೆ ಇದೆ. ರೈತ ಆಸ್ತಿ ಕಳೆದುಕೊಳ್ಳಬೇಕಾದರೆ ಆಗುವ ನೋವಿನ ಅರಿವಿದೆ. ಆ ನೋವನ್ನು ಕಡಿಮೆ ಮಾಡಬೇಕೆನ್ನುವ ಉದ್ದೇಶವೂ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಡಾ. ಕೆ. ಶಿವರಾಮ ಕಾರಂತ ಬಡಾವಣೆ ಅಭಿವೃದ್ಧಿಗಾಗಿ ಭೂಮಿ ನೀಡಿದ ಭೂಮಾಲೀಕರು, ರೈತರಿಗೆ ನೆಹರು ತಾರಾಲಯದಲ್ಲಿ ಸೋಮವಾರ ಭೂ ಪರಿಹಾರ ವಿತರಣೆ ಮಾಡಿ ಮಾತನಾಡಿದರು. ಬೆಂಗಳೂರಿನ ಬಡಾವಣೆಗಳ ನಿರ್ಮಾಣಕ್ಕೆ ಎಲ್ಲಾ ಸರ್ಕಾರಗಳು ಕೊಡುಗೆ ನೀಡಿವೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಡದಿ ಕೈಗಾರಿಕಾ ಟೌನ್ ಮಾಡಲು ಮಾಜಿ ಮುಖ್ಯಮಂತ್ರಿ ದೇವೇಗೌಡರು ಹೊರಟರು. ಆಗ ರೈತರ ಬಳಿ ಚರ್ಚಿಸಿ ಪ್ರತಿ ಎಕರೆಗೆ 5-6 ಲಕ್ಷ ರೂ.ಗಳಂತೆ ಜಮೀನು ಪಡೆಯಲಾಗಿತ್ತು ಎಂದು ಸ್ಮರಿಸಿದರು.
ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಎಲ್ಲಿ ಬಿಡಡಿ ಟೌನ್ಶ ಶಿಪ್ ಮಾಡಲು ಅಧಿಸೂಚನೆ ಹೊರಡಿದ್ದ ಸ್ಥಳದಲ್ಲಿಯೇ ಜಪಾನ್ ಟೌನ್ ಶಿಪ್ ಮಾಡಲು ಮುಂದಾದ ಸಂದರ್ಭದಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅದನ್ನು ಕೈಬಿಡಲಾಯಿತು ಎಂದರು. ಅರ್ಕಾವತಿ, ಕೆಂಪೇಗೌಡ ಬಡಾವಣೆ, ಶಿವರಾಮ ಕಾರಂತ ಬಡಾವಣೆ ಇವೆಲ್ಲ ಈಗ ಆಗಿದೆ. ಬೆಂಗಳೂರು ಸುತ್ತಮುತ್ತ ಬಡಾವಣೆಗಳು ನಿರ್ಮಾಣಗೊಳ್ಳಲು ಎಲ್ಲಾ ಸರ್ಕಾರಗಳು ಕೊಡುಗೆ ನೀಡಿವೆ ಎಂದರು.
ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ 16 ಸಾವಿರ ಕೋಟಿ ಹೂಡಿಕೆ
ಅರ್ಕಾವತಿ, ಕೆಂಪೇಗೌಡ ಬಡಾವಣೆಗಳದ್ದು ತಕರಾರುಗಳೇ ನಡೆಯಿತು. ಡಾ. ಕೆ. ಶಿವರಾಮ ಕಾರಂತ ಬಡಾವಣೆಯ ಪ್ರಕ್ರಿಯೆ ಹಲವು ವರ್ಷಗಳ ಕಾನೂನು ಮತ್ತು ಆಡಳಿತಾತ್ಮಕ ಹಂತಗಳನ್ನು ಒಳಗೊಂಡಿತ್ತು. ಭೂಸ್ವಾಧೀನಕ್ಕೆ ಸಂಬಂಧಿಸಿದ ವಿಚಾರಗಳು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಹಾಗೂ ವಿಭಾಗೀಯ ಪೀಠದ ಹಂತಗಳನ್ನು ದಾಟಿ ಸುಪ್ರೀಂ ಕೋರ್ಟ್ ವರೆಗೂ ಸಾಗಿದ್ದವು. ನ್ಯಾಯಾಲಯಗಳ ನಿರ್ದೇಶನಗಳು ಹಾಗೂ ಸರ್ಕಾರದ ಆದೇಶಗಳ ಹಿನ್ನೆಲೆಯಲ್ಲಿ BDA ಭೂಸ್ವಾಧೀನ ಮತ್ತು ಬಡಾವಣೆಯ ಅಭಿವೃದ್ಧಿ ಪ್ರಕ್ರಿಯೆಯನ್ನು ಮುಂದುವರಿಸಿದೆ ಎಂದರು.
ತಡೆಯಾಜ್ಞೆಯಿಂದಾಗಿ ಯೋಜನೆ ವಿಳಂಬ
ಮೂರು ವರ್ಷಗಳಿಂದಲೇ ಪರಿಹಾರ ನೀಡುವ ಪ್ರಯತ್ನ ಮಾಡಿ ಅರ್ಜಿಗಳನ್ನು ಕರೆಯಲಾಗಿತ್ತು. ನ್ಯಾಯಾಲಯ ತಡೆಯಾಜ್ಞೆ ನೀಡಿದ್ದರಿಂದ ಶಿವರಾಮ ಕಾರಂತ ಬಡವಾಣೆಯ ಭೂ ಮಾಲೀಕರಿಗೆ ಪರಿಹಾರ ನೀಡುವುದು 4400 ರೂ. ನಿವೇಶನ ಅಭಿವೃದ್ಧಿಗೆ ವೆಚ್ಚವಾಗಿತ್ತು. ಶೇ 42% ಮಾತ್ರ ನಿವೇಶನಗಳನ್ನು ನೀಡಲು ಸಾಧ್ಯವಾಗಿದೆ. ಎಕರೆಗೆ ಶೇ. 49% ಕೊಡಲು ಭೂ ಮಾಲೀಕರಿಗೆ ನಿವೇಶನ ಕೊಡಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಅರ್ಜಿ ಪಡೆಯಲು ನ್ಯಾಯಾಲಯ ತಡೆಯಾಜ್ಞೆ ಕೊಟ್ಟದ್ದರಿಂದ ಸರ್ಕಾರಕ್ಕೆ 1000 ಕೋಟಿ ನಷ್ಟವಾಗಿದೆ ಎಂದರು. ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ 16 ಸಾವಿರ ಕೋಟಿ ಹೂಡಿಕೆಯಾಗಿದೆ ಎಂದರು.
ವಾಲ್ ಆಫ್ ಗ್ರಾಟಿಟ್ಯೂಡ್
ಶಿವರಾಮ ಕಾರಂತ ಬಡಾವಣೆಗೆ ಜಮೀನುಕೊಟ್ಟ 3200 ರೈತರ ಹೆಸರುಗಳನ್ನು ವಾಲ್ ಆಫ್ ಗ್ರಾಟಿಟ್ಯೂಡ್ ಮೇಲೆ ಬರೆಸಲಾಗುವುದು ಎಂದರು.
ಎಲ್ಲರನ್ನು ಆಕರ್ಷಿಸುತ್ತಿರುವ ಬೆಂಗಳೂರು ಕೆಂಪೇಗೌಡರು ಕಟ್ಟಿದ ಬೆಂಗಳೂರಿನಲ್ಲಿ ಮಲ್ಲೇಶ್ವರ, ಚಾಮರಾಜಪೇಟೆ, ಜಯನಗರ, ಇಂದಿರಾನಗರದ ಸ್ವಲ್ಪ ಭಾಗ ಬಿಟ್ಟರೆ ಯಾವುದೂ ಯೋಜಿತ ಬಡಾವಣೆಗಳಲ್ಲ. ಎಲ್ಲಿಯೂ ನೂರಡಿ ರಸ್ತೆಗಳಿಲ್ಲ. ಕೆಂಗಲ್ ಹನುಮಂತಯ್ಯನವರು ಮುಖ್ಯಮಂತ್ರಿಗಳಾಗಿದ್ದಾಗ 8 ಲಕ್ಷ ಇದ್ದ ಬೆಂಗಳೂರು ಜನಸಂಖ್ಯೆ ಈಗ ಒಂದೂವರೆ ಕೋಟಿ ಆಗಿದೆ. 60 ಲಕ್ಷ ಜನ ನಿತ್ಯ ಬೆಂಗಳೂರಿಗೆ ಓಡಾಡುತ್ತಾರೆ. ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಾದ ಕೋಲಾರ, ರಾಮನಗರ, ಚನ್ನಪಟ್ಟಣ, ತುಮಕೂರು, ಮಾಗಡಿ, ಕುಣಿಗಲ್, ಮದ್ದೂರು, ಮಂಡ್ಯ ಕ್ಷೇತ್ರದಿಂದ 30-50 ಸಾವಿರ ಜನ ಬೆಂಗಳೂರು ಸೇರಿದ್ದಾರೆ. ಈಶಾನ್ಯ ರಾಜ್ಯಗಳಿಂದ 11 ಲಕ್ಷ ಜನ ಉದ್ಯೋಗಕ್ಕೆ ಸೇರಿಕೊಂಡಿದ್ದಾರೆ. 1.40 ಕೋಟಿ ವಾಹನ ಸಂಖ್ಯೆಇದೆ. ರಸ್ತೆಗಳು ಮಾತ್ರ ಹಾಗೇ ಇದೆ. ಈ ರಸ್ತೆಗಳನ್ನು ಒಡೆಯಲು ಸಾಧ್ಯವಿಲ್ಲ ಎಂದರು.
“ರೈತರ ಮಕ್ಕಳು”ಎಂದು ಹೇಳಿಕೊಳ್ಳುವವರ ಕಾಲದಲ್ಲಿಯೇ ಅಧಿಸೂಚನೆ
ನಾನು ಬರುವ ಮೊದಲು ಬಿಡಿಎ ಮೊದಲು ಬ್ರೋಕರ್ ಅಭಿವೃದ್ಧಿ ಪ್ರಾಧಿಕಾರವಾಗಿತ್ತು. 2008 ರಲ್ಲಿಯೇ ಶಿವರಾಮ ಕಾರಂತ ಬಡಾವಣೆಗೆ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ್ದರು. ತಮ್ಮ ಭೂಮಿ ಕಳೆದುಕೊಳ್ಳುವಾಗ ರೈತರು ಲಂಚ ಕೊಡಬೇಕಾದ ಪರಿಸ್ಥಿತಿ ಇತ್ತು. ಈಗ “ರೈತರ ಮಕ್ಕಳು” ಎಂದು ಮಾತನಾಡುವ ದೊಡ್ಡವರ ಕಾಲದಲ್ಲಿಯೇ 2008 ರಲ್ಲಿಯೇ ಅಧಿಸೂಚನೆ ಹೊರಡಿಸಿದ್ದು. ಅವರ ಕಾಲದಲ್ಲಿಯೇ ಇದು ನಡೆದದ್ದು. ಈಗ ಮಾತನಾಡಲು ಅವರಿಗೆ ಧಮ್ ಇಲ್ಲವೇ ಅವರ ಜಮೀನನ್ನು ಸ್ವಾಧೀನಕ್ಕೆ ಕೊಟ್ಟಿದ್ದಾರೆಯೇ? . ಅವರ ಜಮೀನನ್ನು ಮಾತ್ರ ಬಿಡಿಸಿಕೊಂಡರು. ಅವರದ್ದು ಎಷ್ಟು ಸಾವಿರ ಕರೆ ಇದೆ ಎಂಬ ಅರಿವು ನನಗಿದೆ ಎಂದರು.
ನಿವೇಶನಗಳನ್ನು ಮಾರಿಕೊಳ್ಳಬೇಡಿ; ಸಿಎಂ ಸಲಹೆ
ರೈತರು ಅಲೆಯಬಾರದು, ಲಂಚ ಕೊಡಬಾರದು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತಮ್ಮ ಭೂಮಿಯಲ್ಲಿಯೇ ನಿವೇಶನಗಳನ್ನು ಕೋರಿದವರಿಗೆ ನಿವೇಶನಗಳನ್ನು ಅಲ್ಲಿಯೇ ನೀಡಲಾಗುತ್ತಿದೆ. ಆದರೆ ನಿವೇಶನಗಳನ್ನು ಮಾರಿಕೊಳ್ಳಬೇಡಿ. ಕಷ್ಟ ಎಲ್ಲರಿಗೂ ಬರುತ್ತದೆ. ನಂತರದ ದಿನಗಳಲ್ಲಿ ಇದರ ಬೆಲೆ ಹೆಚ್ಚಳವಾಗಲಿದೆ ಎಂದು ಕಿವಿಮಾತು ಹೇಳಿದರು.
ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣ
ಬಡಾವಣೆಯಲ್ಲಿ 3700 ಎಕರೆಯಲ್ಲಿ ನಿವೇಶನ ನಿರ್ಮಾಣವಾಗಿದ್ದು , 3 ಕೋಟಿಯಷ್ಟು ಚದರ ಅಡಿ ನಿವೇಶನ ಹಂಚಿಕೆ ಮಾಡಲಾಗುತ್ತಿದೆ. 1 ಕೋಟಿ ಯಷ್ಟು ದಾಖಲೆಗಳನ್ನು ಸರಿಮಾಡಬೇಕಿದೆ. 2008 ರಿಂದೀಚೆಗೆ ಸಮಯ ವ್ಯರ್ಥವಾಗಿದೆ. ಪ್ರತಿಯೊಂದರ ಬೆಲೆಯೂ ಹೆಚ್ಚಳವಾಗಿದೆ. ಹಾಗಾಗಿ ಮೂಲೆ ನಿವೇಶನಗಳ ಹರಾಜು ಪ್ರಕ್ರಿಯೆ ಸಮಯಾವಕಾಶ ಅಗತ್ಯವಿದೆ ಎಂದರು. 26,000 ಕೋಟಿ ಸಾಲ ಪಡೆದು ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣವಾಗುತ್ತಿದೆ ಎಂದರು.
ರೈತರಿಗೆ ಅನ್ಯಾಯವಾಗಲು ಬಿಟ್ಟಿಲ್ಲ
ಮೊದಲಿದ್ದ ರಸ್ತೆಯನ್ನು ವರ್ಗಾವಣೆ ಮಾಡಲಾಗಿದ್ದು, ಅಲ್ಲಿ ಜಮೀನನ್ನು 14-15 ಕೋಟಿ ಕೊಟ್ಟು ಸ್ವಾಧೀನ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಇದೆ. ಅದರ ಹೆಸರನ್ನು ವಿಶೇಷವಾಗಿ ಹೇಳಬೇಕಾಗಿಲ್ಲ. ಈ ಬಗ್ಗೆ ದಾಖಲೆಗಳು ನಮ್ಮ ಬಳಿ ಇವೆ. ಸಮಯ ಬಂದಾಗ ಅದನ್ನು ಹೇಳುತ್ತೇನೆ ಎಂದರು. ಬಿಡಿಎಗಾಗಿ ಜಮೀನು ಕಳೆದುಕೊಂಡರೆ ಹಳೆ ದರವೇ ಕೊಡಬೇಕೆಂದಿದೆ. ಆದರೆ ರೈತರಿಗೆ ಅನ್ಯಾಯವಾಗಬಾರದೆಂದು ಇದನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಗೈಡೆನ್ಸ್ ವ್ಯಾಲ್ಯೂ ದುಪ್ಪಟ್ಟು ಕೊಡಲು ತೀರ್ಮಾನಿಸಿ, ಇಲ್ಲದಿದ್ದರೆ ದುಪ್ಪಟ್ಟು ಟಿಡಿಆರ್, ಇಲ್ಲದಿದ್ದರೆ 35 % ವಾಣಿಜ್ಯ ನಿವೇಶನ, FAR ಅಥವಾ ದೇಶದಲ್ಲಿಯೇ 40 % ರಷ್ಟು ಹೆಚ್ಚು ಪರಿಹಾರವನ್ನು ನೀಡಲಾಗಿದೆ ಎಂದರು.
ದೇವರು ಕೊಟ್ಟುಹೋಗುವುದು ಅಥವಾ ಬಿಟ್ಟುಹೋಗುವುದು ಎಂಬ ಎರಡು ಆಯ್ಕೆಗಳನ್ನು ಮಾತ್ರ ಕೊಟ್ಟಿದ್ದಾನೆ. ಅವರು ಕೊಟ್ಟ ಅವಕಾಶವನ್ನು ಪ್ರಾಮಾಣಿಕವಾಗಿ ಬಳಸಿಕೊಳ್ಳಬೇಕು. ಮುಂದೆ ಯಾವುದೇ ಸಮಸ್ಯೆಗಳಿಲ್ಲದೇ ನಿಮ್ಮ ದಾಖಲೆಗಳನ್ನು ಒಡೆಯಬಹುದು. ಈ ಆಸ್ತಿಗೆ ಪೆರಿಫೆರಲ್ ರಸ್ತೆಗೆ ಟೆಂಡರ್ ಕರೆದಿದ್ದು, ಕೋಗಿಲು ತನಕ ಕಾಮಗಾರಿ ನಡೆಯುತ್ತಿದೆ. ಶೇ 80ರಷ್ಟು ಭೂ ಸ್ವಾಧೀನವಾಗಿದೆ ಎಂದರು. ಇದಾದರೆ ನಿಮ್ಮ ಆಸ್ತಿಯ ಬೆಲೆ ದುಪ್ಪಟ್ಟಾಗಲಿದೆ ಎಂದರು. ಇದು ಉತ್ತಮ ಬಡಾವಣೆ, ಮುಂದಕ್ಕೆ ಇಂತಹ ಬಡಾವಣೆ ನಿರ್ಮಾಣ ಸಾಧ್ಯವಿಲ್ಲ ಎಂದರು.
ತೇಗದ ಸಿರಿ
ಒಂದು ವರ್ಷಕ್ಕೆ ಕನಿಷ್ಠ 15 ಕೋಟಿ ತೇಗದ ಸಸಿ ನೆಡುವ ಕಾರ್ಯಕ್ರಮ ರೂಪಿಸಲಾಗಿದ್ದು, ಸಸಿಯನ್ನು ಸರ್ಕಾರವೇ ನೀಡುತ್ತದೆ. ಗಿಡವನ್ನು ರೈತರೇ ಕಾಪಾಡಿಕೊಳ್ಳಬೇಕು. 25 ವರ್ಷಗಳಲ್ಲಿ 7500 ಚದರ ಅಡಿಯಲ್ಲಿ ತೇಗ ನೆಡಲಾಗುವುದು.ಇದರಿಂದ ಬರುವ ಲಾಭಾಂಶದಲ್ಲಿ ಶೇ 70 % ರೈತರಿಗೆ 30 % ಸರ್ಕಾರಕ್ಕೆ ಹಂಚಿಕೆಯಾಗುವುದು ಎಂದರು.

