ನಾಳೆಯಿಂದ ವೈದ್ಯರ ಮುಷ್ಕರ : ಒಪಿಡಿ ಬಂದ್

ಮಾರ್ಚ್‌ 16 ರಿಂದ ಅನಿರ್ದಿಷ್ಟಾವಧಿ ಮುಷ್ಕರ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಾಳೆಯಿಂದ ಸರ್ಕಾರಿ ವೈದ್ಯರು ಮುಷ್ಕರ ನಡೆಸಲಿದ್ದಾರೆ.
ಮುಷ್ಕರ ಹಿನ್ನೆಲೆ ಹೊರ ರೋಗಿಗಳ ಸೇವೆ ಸ್ಥಘಿತಗೊಳ್ಳುವ ಸಾಧ್ಯತೆ ಇದೆ. ಇದರಿಂದ ಸಾಮಾನ್ಯ ರೋಗಗಳಿಗೆ ಅಡಚಣೆಯಾಗುವ ಸಾಧ್ಯತೆಗಳಿವೆ.

ರಾಜ್ಯದ ಸರ್ಕಾರಿ ಆಸ್ಪತ್ರೆಗಳ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ.   ರಾಜ್ಯಾದ್ಯಂತ ಅದರಲ್ಲೂ ಬೆಂಗಳೂರಿನಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ನಿರ್ಮಾಣವಾಗುವ ಆತಂಕ ಎದುರಾಗಿದೆ.

ಹಲವು ವರ್ಷಗಳಿಂದ ಬಾಕಿ ಉಳಿದಿರುವ ವೃಂದ ಹಾಗೂ ನೇಮಕಾತಿ ಸಮಸ್ಯೆಗಳನ್ನು ಪರಿಹರಿಸುವಂತೆ ಅವರು ಒತ್ತಾಯಿಸಿದ್ದಾರೆ. ಜೊತೆಗೆ13 ವರ್ಷಗಳಿಂದ ಪರಿಷ್ಕರಣೆ ಆಗದ ವೈದ್ಯರ ಜೇಷ್ಠತಾ ಪಟ್ಟಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ, ವೈದ್ಯಕೀಯ ಸಿಬ್ಬಂದಿ ಕೊರತೆ ಸೇರಿದಂತೆ ಇನ್ನಿತರ 15 ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ. ರವೀಂದ್ರನಾಥ್‌ ಮೇಟಿ ನೇತೃತ್ವದಲ್ಲಿ ವೈದ್ಯರು ಇಂದು ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತಾನಾಡಿದರು. ಸರ್ಕಾರಕ್ಕೆ ಹಲವು ಬಾರಿ ಮನವಿ ಕೊಟ್ಟಿದಿವಿ. ಯಾವುದೇ ಪ್ರಯೋಜನವಾಗಿಲ್ಲ.   ಅನಿರ್ವಾರ್ಯವಾಗಿ ಪ್ರತಿಭಟನೆ ಹಾದಿ ಹಿಡಿಯಬೇಕಿದೆ ಎಂದಿದ್ದಾರೆ.

ನಾಳೆ ವೈದ್ಯರು ಹಾಗೂ ಸಿಬ್ಬಂದಿ ಕಪ್ಪುಪಟ್ಟಿ ಧರಿಸಿ ಓಪಿಡಿ ಸೇವೆ ಸ್ಥಗಿತ ಮಾಡಲಿದ್ದಾರೆ. ಮಾರ್ಚ್‌ 16ರ ನಂತರ ಸಾಮೂಹಿಕವಾಗಿ ಕರ್ತವ್ಯಕ್ಕೆ ಗೈರು ಹಾಜರಾಗಲು ತೀರ್ಮಾನಿಸಿದ್ದಾರೆ. ಅನಿರ್ದಿಷ್ಟಾವಶಿ ಮುಷ್ಕರಕ್ಕೆ ನಿರ್ಧರಿಸಿದ್ದಾರೆ. 

More articles

Latest article

Most read