ಕೊಪ್ಪಳ: ತುಂಗಭದ್ರಾ ನದಿಯಲ್ಲಿ ಈಜಲು ದುಮುಕಿದ್ದ ಆಂಧ್ರಪ್ರದೇಶ ಮೂಲದ ವೈದ್ಯೆ ನೀರು ಪಾಲಾಗಿರುವ ದುರಂತ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದೆ. ಹೈದರಬಾದ್ ಮೂಲದ ಅನನ್ಯರಾವ್ (26)ನೀರು ಪಾಲದ ವೈದ್ಯೆ. ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅನನ್ಯರಾವ್ ಮೂವರು ಸ್ನೇಹಿತರ ಜತೆ ಪ್ರವಾಸಕ್ಕೆ ಆಗಮಿಸಿದ್ದರು. ಇಂದು ಬೆಳಗ್ಗೆ ಸ್ನೇಹಿತರ ಜತೆ ನದಿಯಲ್ಲಿ ಈಜಲು ತೆರಳಿದ್ದರು. ಅನನ್ಯರಾವ್ ಸುಮಾರು 20 ಅಡಿ ಎತ್ತರದಿಂದ ಜಿಗಿದಿದ್ದಾರೆ. ಆದರೆ ನೀರಿನ ಅಲೆಯ ಅಬ್ಬರಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ. ಇನ್ನು ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದು, ವೈದ್ಯೆಗಾಗಿ ಶೋಧ ಕಾರ್ಯ ನಡೆಸಿದ್ದಾರೆ.