ಅರಸೀಕೆರೆ: ಖ್ಯಾತ ನಟ ಡಾಲಿ ಧನಂಜಯ ಹಾಗೂ ಧನ್ಯತಾ ಅವರು ವಿವಾಹ ಮೈಸೂರಿನಲ್ಲಿ ಫೆಬ್ರವರಿ 15 ಹಾಗೂ 16ರಂದು ನೆರವೇರಲಿದೆ. ಮದುವೆಗೆ ಸಕಲ ಸಿದ್ದತೆಗಳು ಆರಂಭಗೊಂಡಿವೆ. ಧನಂಜಯ ಅವರ ಹುಟ್ಟೂರಾದ ಕಾಳೇನಹಳ್ಳಿಯಲ್ಲಿ ಮದುವೆ ಸಂಭ್ರಮ ಕಳೆಗಟ್ಟಿದಿದೆ. ಸಂಪ್ರದಾಯದಂತೆ ಅರಸಿಕೆರೆಯ ಜೇನುಕಲ್ಲು ಸಿದ್ದೇಶ್ವರ ದೇವರ ಕೊಂಡ ತುಳಿದು ಸಂಪ್ರದಾಯ ಆಚರಿಸಿದ್ದಾರೆ. ನಂತರ ಮನೆಯಲ್ಲಿ ಮನೆದೇವರ ಪೂಜೆ ನೆರವೇರಿಸಿದರು.