ನವದೆಹಲಿ: ಶ್ರೀ ಸಾಮಾನ್ಯರ ಮೇಲೆ ಬರ ಎಳೆಯುವುದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೈಪೋಟಿ ನಡೆಸುತ್ತಿವೆಯೇನೋ ಎಂದು ಭಾಸವಾಗುತ್ತಿದೆ. ಕೇಂದ್ರ ಸರ್ಕಾರ ಇದೀಗ ಗೃಹ ಬಳಕೆಯ 14.2 ಕಿಲೋ ಎಲ್ಪಿಜಿ ಬೆಲೆಯನ್ನು ಸಿಲಿಂಡರ್ ಗೆ 50 ರೂ. ನಷ್ಟು ಹೆಚ್ಚಳ ಮಾಡಿದೆ. ಕೇಂದ್ರ ತೈಲ ಸಚಿವ ಹರ್ ದೀಪ್ ಸಿಂಗ್ ಪುರಿ ಅವರು ಎಲ್ಪಿಜಿ ಬೆಲೆ ಏರಿಕೆ ಮಾಡಿರುವುದನ್ನು ಖಚಿತಪಡಿಸಿದ್ದಾರೆ.
ಕಳೆದ ವಾರವಷ್ಟೇ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಲಾಗಿತ್ತು. ಸಾಮಾನ್ಯ ಬಳಕೆದಾರರಿಗೆ ಮಾತ್ರವಲ್ಲ, ಉಜ್ವಲ ಯೋಜನೆಯ ಫಲಾನುಭವಿಗಳಿಗೂ ಈ ಬೆಲೆ ಏರಿಕೆಯ ಬಿಸಿ ತಾಕಿದೆ. ಇನ್ನು ಮುಂದೆ ಉಜ್ವಲ ಯೋಜನೆಯ 503 ರೂ. ಪಾವತಿಸುತ್ತಿದ್ದ 14.2 ಕೆಜಿ ಸಿಲಿಂಡರ್‌ಗೆ 553 ರೂ. ಹಾಗೂ ಇತರೇ ಗ್ರಾಹಕರು 803 ರೂ. ಪಾವತಿಸುತ್ತಿದ್ದ 14.2 ಕೆಜಿ ಸಿಲಿಂಡರ್‌ಗೆ 853 ರೂ. ಪಾವತಿಸಬೇಕಾಗುತ್ತದೆ.