Thursday, April 3, 2025

ತಿಹಾರ್‌ ಜೈಲಿಗೆ ಹಾಕಿದರೂ ಬಗ್ಗುವುದಿಲ್ಲ; ಬಿಜೆಪಿ ವಿರುದ್ಧ ಗುಡುಗಿದ ಡಿಕೆ ಶಿವಕುಮಾರ್‌

Most read

ಚೆನ್ನೈ:  ನನ್ನನ್ನು ದೆಹಲಿಯ ತಿಹಾರ್‌ ಜೈಲಿಗೆ ಹಾಕಿದರೂ ನಾನು ಜಗ್ಗುವವನಲ್ಲ,ಬಗ್ಗುವವನೂ ಅಲ್ಲ. ನಮ್ಮ ಹೋರಾಟ ನಿರಂತರವಾಗಿ ಇದ್ದೇ ಇರುತ್ತದೆ. ಬಿಜೆಪಿಯವರು ಕಪ್ಪು ಬಾವುಟ, ಕಪ್ಪು ಅಂಗಿ ಧರಿಸಿ ನನ್ನ ವಿರುದ್ದ ಹಾಗೂ ನಾವು ನಡೆಸುತ್ತಿರುವ ಸಭೆಗಳ ವಿರುದ್ದ ಪ್ರತಿಭಟನೆ ಮಾಡಿರಬಹುದು. ಹೋರಾಟವನ್ನು ನಾನು ಸ್ವಾಗತಿಸುತ್ತೇನೆ. ಆದರೆ ನಮ್ಮ ಹೋರಾಟವನ್ನು ನಿಲ್ಲಿಸಲು ಆಗುವುದಿಲ್ಲ. ನನ್ನನ್ನು ಜೈಲಿಗೆ ಹಾಕಿದರೂ ಸರಿಯೇ ಹೋರಾಟ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಗುಡುಗಿದ್ದಾರೆ.

ಚೆನ್ನೈ ನಗರಕ್ಕೆ ಆಗಮಿಸಿದ ಅವರ ವಿರುದ್ಧ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು. ಅಣ್ಣಾಮಲೈ ನೇತೃತ್ವದಲ್ಲಿ ಕಪ್ಪು ಬಾವುಟ ಪ್ರದರ್ಶನ ನಡೆಯಿತು.

ಕೇಂದ್ರ ಸರ್ಕಾರ ಲೋಕಸಭೆ ಕ್ಷೇತ್ರಗಳ ಪುನರ್‌ ವಿಂಗಡನೆ ನಡೆಸಲಿದ್ದು, ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎಂದು ತಮಿಳುನಾಡಿನ ಆಡಳಿತಾರೂಢ ಡಿಎಂಕೆ ದನಿ ಎತ್ತಿದೆ. ಇದಕ್ಕೆ ಪೂರಕವಾಗಿ ದಕ್ಷಿಣ ಹಾಗೂ ಉತ್ತರ ಭಾರತದ ಆಡಳಿತ ಪಕ್ಷಗಳು ಹಾಗೂ ಪ್ರಮುಖ ನಾಯಕರ ಸಭೆಯನ್ನು ಚೆನ್ನೈನಲ್ಲಿ ನಡೆಯುತ್ತಿದೆ.  ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ  ಡಿಸಿಎಂ ಡಿ.ಕೆ.ಶಿವಕುಮಾರ್‌ ಭಾಗವಹಿಸಿದ್ದಾರೆ.

ಲೋಕಸಭಾ ಕ್ಷೇತ್ರಗಳ ಪುನರ್‌ವಿಂಗಡನೆ  ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಸಂಸತ್ತಿನಲ್ಲಿ ತಮ್ಮ ತಮ್ಮ ರಾಜ್ಯಗಳ ಸ್ಥಾನಗಳನ್ನು ಯಾವುದೇ ಹಂತದಲ್ಲೂ ಕಡಿಮೆ ಮಾಡಲು ಬಿಡುವುದಿಲ್ಲ. ಹೋರಾಟದ ಹೆಜ್ಜೆ ಇಟ್ಟಿದ್ದಕ್ಕಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರನ್ನು ಅಭಿನಂದಿಸುತ್ತೇನೆ. ಸ್ಟಾಲಿನ್ ಈ ದೇಶದ ಒಕ್ಕೂಟ ರಚನೆ ಮತ್ತು ಸಂವಿಧಾನವನ್ನು ರಕ್ಷಿಸುತ್ತಿದ್ದಾರೆ ಎಂದು ಹೇಳಿದರು.

 ಅವರು ಮೊದಲ ಹೆಜ್ಜೆ ಇಟ್ಟಿದ್ದಾರೆ. ಈ ದೇಶದ ಒಕ್ಕೂಟ ರಚನೆ ಮತ್ತು ಸಂವಿಧಾನವನ್ನು ರಕ್ಷಿಸಲು ನಾವು ತುಂಬಾ ಹೆಮ್ಮೆಪಡುತ್ತೇವೆ. ಒಟ್ಟಿಗೆ ಸೇರುತ್ತಿರುವುದು ಆರಂಭ. ಇಂದು, ನಾವೆಲ್ಲರೂ ಸುಧಾರಣೆ ಏನು ಎಂದು ಚರ್ಚಿಸುತ್ತೇವೆ ಮತ್ತು ಒಟ್ಟಿಗೆ ಕೆಲಸ ಮಾಡುತ್ತೇವೆ ಎಂದರು. ತೆಲಂಗಾಣ, ಪಂಜಾಬ್ ಮತ್ತು ಕೇರಳದ  ಮುಖ್ಯಮಂತ್ರಿಗಳು ಇಲ್ಲಿ ಸೇರಿದ್ದಾರೆ. ನಾವು ಯಾವುದೇ ಕಾರಣಕ್ಕೂ ನಮ್ಮ ದೇಶದ ಗೌರವ ಮತ್ತು ನಮ್ಮ ಸ್ಥಾನಗಳನ್ನು ಕಡಿಮೆ ಮಾಡಲು ಬಿಡುವುದಿಲ್ಲ. ನಮ್ಮದು ಪ್ರಗತಿಪರ ದೇಶ. ನಾವು ಆರ್ಥಿಕವಾಗಿ ವೇಗವಾಗಿ ಮುಂದೆ ಸಾಗುತ್ತಿದ್ದೇವೆ. ನಾವು ಒಗ್ಗಟ್ಟಾಗಿ ನಿಲ್ಲುತ್ತೇವೆ ಮತ್ತು ಯಾವುದೇ ಸ್ಥಾನಗಳು ಕಡಿಮೆಯಾಗದಂತೆ ನೋಡಿಕೊಳ್ಳುತ್ತೇವೆ. ಬಿಜೆಪಿಯ ಕಪ್ಪು ಬಾವುಟ ಪ್ರತಿಭಟನೆಯನ್ನು ನಾನು ಸ್ವಾಗತಿಸುತ್ತೇನೆ. ಅವರು ನನ್ನನ್ನು ತಿಹಾರ್ ಜೈಲಿಗೆ ಕಳುಹಿಸಿದರೂ ನಾನು ಹೆದರುವುದಿಲ್ಲ ಎಂದು ಶಿವಕುಮಾರ್ ಹೇಳಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಕ್ಷೇತ್ರಗಳ ಪುನರ್‌ವಿಂಗಡಣೆ ಕುರಿತು ಚರ್ಚಿಸಲು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ನಾಯಕರ ಸಭೆ ಕರೆದಿದ್ದಾರೆ. ಸಭೆ ನಡೆಯುವ ಸ್ಥಳದ ಸಮೀಪ ಸಂಖ್ಯೆಯ ಪೋಸ್ಟರ್ ಗಳು ಮತ್ತು ಬ್ಯಾನರ್ ಗಳನ್ನು ಹಾಕಲಾಗಿದೆ.

More articles

Latest article