ಬರ್ತ್‌ ಡೇ ಆಚರಿಸಬೇಡಿ: ಅಭಿಮಾನಿಗಳಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

ಬೆಂಗಳೂರು: ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಹೋರಾಡುತ್ತಿರುವ ಈ ಸಂದರ್ಭದಲ್ಲಿ ನಾಳೆ ಗುರುವಾರ, ಮೇ 15 ರಂದು ಯಾರೂ ನನ್ನ ಜನ್ಮದಿನಾಚರಣೆಯನ್ನು ಆಚರಿಸಬಾರದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ ನಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಸಂದರ್ಭ ಇದಾಗಿದೆ. ಹೀಗಾಗಿ ಮೇ 15 ರಂದು ಯಾರೂ ನನ್ನ ಜನ್ಮದಿನವನ್ನು ಆಚರಣೆ ಮಾಡುವುದು ಬೇಡ ಎಂದು ವಿನಂತಿ ಮಾಡುತ್ತೇನೆ. ನಿಮ್ಮ ಆಶೀರ್ವಾದ ಸದಾ ಹೀಗೆ ಇರಲಿ, ಅದುವೇ ನನಗೆ ಶ್ರೀರಕ್ಷೆ ಎಂದಿದ್ದಾರೆ.

ಮೇ 15 ರಂದು ನಾನು ಬೆಂಗಳೂರಿನಲ್ಲಿ ಇರುವುದಿಲ್ಲ, ಅಂದು ನನ್ನನ್ನು ಭೇಟಿ ಮಾಡಲು ಯಾರೂ ನನ್ನ ನಿವಾಸ, ಕಚೇರಿಗೆ ಬರುವುದು ಬೇಡ. ಜನ್ಮದಿನದ ಹೆಸರಿನಲ್ಲಿ ಯಾರೊಬ್ಬರೂ ಸಂಭ್ರಮಾಚರಣೆ ಮಾಡಬಾರದು. ಸದ್ಯದ ಪರಿಸ್ಥಿತಿ ಅರ್ಥ ಮಾಡಿಕೊಂಡು ಸಹಕರಿಸುವಂತೆ ಅಭಿಮಾನಿಗಳು ಮತ್ತು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

More articles

Latest article

Most read