ಬೆಂಗಳೂರು: ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ. ಹಾಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಆದರೂ ಮೊಟ್ಟೆ ಮತ್ತು ಮಾಂಸವನ್ನು ಸೇವಿಸುವಾಗ ಕೆಲ ಎಚ್ಚರಿಕೆಗಳನ್ನು ಪಾಲಿಸಬೇಕು. ಮೊಟ್ಟೆ ಮತ್ತು ಮಾಂಸವನ್ನು 70 ಡಿಗ್ರಿ ಉಷ್ಣಾಂಶದಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಬೇಯಿಸಿ ಸೇವಿಸಬೇಕು ಎಂದು ಸಲಹೆ ನೀಡಿದ್ದಾರೆ.
ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿವೆ. ಸೋಂಕು ಪೀಡಿತ ಕೋಳಿ ಫಾರಂ, ಮೃತ ಹಕ್ಕಿ ಅಥವಾ ಕೋಳಿಗಳ ಸಮೀಪಕ್ಕೆ ಹೋಗದೆ ಎಚ್ಚರಿಕೆ ವಹಿಸಬೇಕು ಎಂದು ಸಚಿವರು ತಿಳಿಸಿದ್ದಾರೆ.