Sunday, September 8, 2024

IND v/s ENG : ದ್ವಿಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್‌

Most read

ಭಾರತ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್‌ ಇಂಗ್ಲೆಂಡ್‌ ವಿರುದ್ಧದ ಎರಡನೇ ಟೆಸ್ಟ್‌ ನಲ್ಲಿ ದ್ವಿಶತಕ ಸಿಡಿಸಿದ್ದಾರೆ. ಜೈಸ್ವಾಲ್ ತಮ್ಮ ಮೊದಲ ಟೆಸ್ಟ್ ದ್ವಿಶತಕವನ್ನು ಆರನೇ ಟೆಸ್ಟ್‌ ಪಂದ್ಯದಲ್ಲಿ ಗಳಿಸಿದ್ದಾರೆ.

ಮೊದಲ ದಿನ ಯಶಸ್ವಿ ಜೈಸ್ವಾಲ್‌ 179 ರನ್‌ ಗಳಿಸಿ ಅಜೇಯರಾಗಿ ಉಳಿದಿದ್ದರು. ಟೆಸ್ಟ್‌ ಪಂದ್ಯದ ಎರಡನೇ ದಿನದಂದು ಆರಂಭಿಕ ಆಟಗಾರ ಜೈಸ್ವಾಲ್‌ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡುವ ಜೊತೆಗೆ, ಭರ್ಜರಿ ಬೌಂಡರಿಗಳನ್ನು ಸಿಡಿಸುವ ಮೂಲಕ 277 ಎಸೆತಗಳಲ್ಲಿ ದ್ವಿಶತಕ ಸಿಡಿಸಿ ಸಾಧನೆ ಮಾಡಿದ್ದಾರೆ.

ಕಳೆದ ವರ್ಷ ಜುಲೈನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್‌ಗೆ ಪದಾರ್ಪಣೆ ಮಾಡಿದ್ದ ಜೈಸ್ವಾಲ್ 171 ರನ್‌ಗಳ ಇನ್ನಿಂಗ್ಸ್ ಆಡುವ ಮೂಲಕ ತಮ್ಮ ಕ್ರಿಕೆಟ್‌ ಜೀವನಕ್ಕೆ  ಉತ್ತಮ ಆರಂಭವನ್ನು ನೀಡಿದ್ದರು. ಇಂದು ತಮ್ಮ ಕೇವಲ 10ನೇ ಇನ್ನಿಂಗ್ಸ್ನಲ್ಲಿ ದ್ವಿಶತಕ ಗಳಿಸಿದ್ದಾರೆ.

More articles

Latest article