ಬೆಂಗಳೂರು: ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿಯಲ್ಲಿ ಖ್ಯಾತ ಚಿತ್ರ ನಿರ್ದೇಶಕ, ನಟ ಎಸ್.ನಾರಾಯಣ್, ಪತ್ನಿ, ಹಾಗೂ ಪುತ್ರ ಪವನ್ ವಿರುದ್ಧ ದೂರು ದಾಖಲಾಗಿದೆ.
ಈ ಕುರಿತು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಸ್.ನಾರಾಯಣ್ ಅವರ ಸೊಸೆ ಪವಿತ್ರಾ ದೂರು ದಾಖಲಿಸಿದ್ದಾರೆ. ಎಸ್.ನಾರಾಯಣ್, ಅವರ ಪತ್ನಿ ಭಾಗ್ಯಲಕ್ಷ್ಮಿ ಮತ್ತು ಪವಿತ್ರಾ ಪತಿ ಪವನ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಈ ಆರೋಪವನ್ನು ಅಲ್ಲಗಳೆದಿರುವ ನಾರಾಯಣ್, ಸೊಸೆ ಒಂದು ವರ್ಷದ ಹಿಂದೆಯೇ ಮನೆ ಬಿಟ್ಟು ಹೋಗಿದ್ದು, ಈಗ ಏಕೆ ದೂರು ನೀಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಮದುವೆಯಲ್ಲಿ ವರದಕ್ಷಿಣೆ ಕೊಟ್ಟಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಹಲ್ಲೆ ನಡೆಸಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ
ದೂರಿನ ವಿವರ ಏನೆಂದರೆ ನಿರ್ದೇಶಕ ಎಸ್.ನಾರಾಯಣ್ ಪುತ್ರ ಪವನ್ ಅವರ ಜತೆ ನನನಗೆ 2021ರಲ್ಲಿ ಮದುವೆ ನಡೆಯಿತು. ಪವನ್ ಹೆಚ್ಚಿಗೆ ಓದಿರದ ಕಾರಣ ನಿರುದ್ಯೋಗಿಯಾಗಿದ್ದರು. ನಾನೇ ಕೆಲಸಕ್ಕೆ ಹೋಗಿ ಮನೆ ನಡೆಸುತ್ತಿದ್ದೆ. ನಂತರ ಪವನ್ ಅವರು, ಕಲಾ ಸಾಮ್ರಾಟ್ ಟೀಂ ಅಕಾಡೆಮಿ ಫಿಲ್ಮ್ ಇನ್ಸ್ಟಿಟ್ಯೂಟ್ ಪ್ರಾರಂಭಿಸಲು ನನ್ನ ಬಳಿ ಹಣ ಕೇಳಿದ್ದರು. ಆಗ ನನ್ನ ತಾಯಿಯ ಒಡವೆಗಳನ್ನು ತಂದುಕೊಟ್ಟಿದ್ದೆ.ನಂತರ ಅಕಾಡೆಮಿಯನ್ನೂ ಮುಚ್ಚಿದರು.
ಮದುವೆ ಸಂದರ್ಭದಲ್ಲಿ ಯಲ್ಲಿ 1 ಲಕ್ಷ ರೂ. ಮೌಲ್ಯದ ಉಂಗುರ ಹಾಗೂ ಮದುವೆಯ ಸಂಪೂರ್ಣ ಖರ್ಚು ನೋಡಿಕೊಂಡಿದ್ದೆವು. ವರದಕ್ಷಿಣೆ ಕೊಟ್ಟಿದ್ದರೂ ನನ್ನ ಮೇಲೆ ಹಲ್ಲೆ ನಡೆಸಿ ಹಣ ತರುವಂತೆ ಒತ್ತಾಯಿಸಿದ್ದಾರೆ. ನಾನು ನಿರಾಕರಿಸಿದಾಗ ನನ್ನನ್ನು ಮನೆಯಿಂದ ಹೊರಗೆ ಹಾಕಿದ್ದರು ಎಂದು ಹೇಳಿದ್ದಾರೆ.