ಅರಣ್ಯ ನಿವಾಸಿಗಳಿಗೆ ಡಾ. ಅಂಜಲಿ ಹೇಮಂತ್‌ ನಿಂಬಾಳ್ಕರ್‌ ಅಭಯ: ಗೆದ್ದರೆ ಮೊದಲ ಅಧಿವೇಶನದಲ್ಲೇ ಧ್ವನಿ ಎತ್ತುವೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಎಲ್ಲ ತಾಲ್ಲೂಕುಗಳ ಅರಣ್ಯವಾಸಿಗಳು ಅನುಭವಿಸುತ್ತಿರುವ ಸಮಸ್ಯೆಗಳು, ನೋವಿನ ಬಗ್ಗೆ ಕಾಳಜಿ ಇದ್ದು, ಒಂದು ವೇಳೆ ಆಯ್ಕೆಯಾಗಿ ಬಂದರೆ ಲೋಕಸಭೆಯ ಮೊದಲ ಅಧಿವೇಶನದಲ್ಲೇ ನಿಮ್ಮ ಪರವಾಗಿ ಧ್ವನಿ ಎತ್ತುತ್ತೇನೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಡಾ.ಅಂಜಲಿ ಹೇಮಂತ್‌ ನಿಂಬಾಳ್ಕರ್‌ ವಾಗ್ದಾನ ನೀಡಿದ್ದಾರೆ.

ಶಿರಸಿಯಲ್ಲಿ ನಡೆದ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಅರಣ್ಯವಾಸಿಗಳ ಒಕ್ಕಲೆಬ್ಬಿಸುವಿಕೆ ಸೇರಿದಂತೆ ಅರಣ್ಯವಾಸಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನಿಸಿದ್ದೇನೆ. ಆಯ್ಕೆಯಾಗಿ ಬಂದರೆ ಅರಣ್ಯವಾಸಿಗಳ ಪರವಾಗಿ ಹೋರಾಟ ನಡೆಸುತ್ತೇನೆ ಎಂದು ಭರವಸೆ ನೀಡಿದರು.

ನನಗೆ ನಿಮ್ಮ ಆಶೀರ್ವಾದ ಬೇಕು. ನಿಮ್ಮ ಆಶೀರ್ವಾದ ಸಿಕ್ಕರೆ ಉತ್ತರ ಕನ್ನಡದ ಜನರ ಧ್ವನಿಯಾಗಿ ಕೆಲಸ ಮಾಡುತ್ತೇನೆ. ಇದರಲ್ಲಿ ಯಾವ ಸಂಶಯವೂ ಬೇಡ ಎಂದು ಅವರು ಹೇಳಿದರು.

ಸಭೆಯಲ್ಲಿ ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಸಚಿವರಾದ ಮಂಕಾಳ ಎಸ್.ವೈದ್ಯ, ಶಾಸಕ ಭೀಮಣ್ಣ ನಾಯ್ಕ್‌ ಮುಖಂಡರಾದ ಜಿ.ಟಿ.ನಾಯ್ಕ, ಸಾಯಿ ಗಾಂವ್ಕರ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

More articles

Latest article

Most read