ನಿಗಮ ಮಂಡಳಿಗಳ ಪಟ್ಟಿ ಸಿದ್ದಪಡಿಸುವಾಗ ನಮ್ಮ ಅಭಿಪ್ರಾಯ ಕೇಳಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

ನಿಗಮ – ಮಂಡಳಿಗಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರರನ್ನು ನೇಮಕ ಪಟ್ಟಿ ಸಿದ್ದಪಡಿಸುವಾಗ ನಮ್ಮ ಅಭಿಪ್ರಾಯವನ್ನು ಯಾರು ಕೇಳಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ನಿಗಮ ಮಂಡಳಿಗಳ ಪಟ್ಟಿ ಯಾವಾಗ ಬೇಕಾದರು ಬಿಡುಗಡೆಯಾಗಬಹುದ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಒಂದೆರಡು ಹೆಸರು ಕೊಡಿ ಅಂದಾಗ ಕೊಟ್ಟಿದ್ದೇನೆ. ಆದರೆ, ನಮ್ಮ ಜೊತೆ ಮಾತಾಡಿ ಪಟ್ಟಿ ಮಾಡಿಲ್ಲ. ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿರುವ ಮುಖಂಡರ ಕೆಲಸ ನಮಗೆ ಗೊತ್ತಿರುತ್ತೆ. ಸಿಎಂ ಹಾಗೂ ಪಕ್ಷದ ‌ಅಧ್ಯಕ್ಷರು ಇದ್ದಾರೆ. ಆಯ್ಕೆ ವಿಚಾರದ ಜವಾಬ್ದಾರಿಯನ್ನು ಅವರಿಗೆ ಬಿಡಬೇಕು ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಜಿಲ್ಲಾ ನಾಯಕರ ಜೊತೆ ಮಾತನಾಡಿ ಪಟ್ಟಿ ಮಾಡಬೇಕು. ಅದರೆ ಈಗ ಪಕ್ಷದ ಪ್ರಧಾನ ಕಾರ್ಯದರ್ಶಿಯವರೇ ಮಾಡುತ್ತಿದ್ದಾರೆ.‌ ಹೀಗಾಗಿ‌ ಪಟ್ಟಿ ಸಿದ್ಧಪಡಿಸುವುದು ನಿಧಾನವಾಗಿದೆ. ನಾನು ಸಹ 8 ವರ್ಷ ಪಕ್ಷದ ಅಧ್ಯಕ್ಷನಾಗಿದ್ದೇನೆ. ಯಾರು ಯಾರು ಕೆಲಸ ಮಾಡಿದ್ದಾರೆ ಎಂಬುದು ನನಗೆ ಗೊತ್ತಿದೆ. ಹತ್ತಾರು ವರ್ಷ ಪಕ್ಷಕ್ಕೆ ದುಡಿದವರಿದ್ದಾರೆ. ಅವರಿಗೆ ಅಧಿಕಾರ ಕೊಡಬೇಕು. ಕೆಲಸ ಮಾಡದವರಿಗೆ ಅಧಿಕಾರ ಕೊಟ್ಟರೆ, ಕೆಲಸ ಮಾಡಿರುವರಿಗೆ ನೋವು, ಅಸಮಾಧಾನವಾಗುತ್ತದೆ. ಹೀಗಾಗಿ ಮುಖಂಡರು, ಜಿಲ್ಲಾ ಅಧ್ಯಕ್ಷರ ಸಲಹೆಗಳನ್ನು ಕೇಳಬೇಕಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

More articles

Latest article

Most read