ಚಿಕ್ಕಬಳ್ಳಾಪುರ‌ ಬಿಜೆಪಿ ಅಭ್ಯರ್ಥಿ ಸುಧಾಕರ್ ಆಪ್ತನ ಮನೆ ಮೇಲೆ ಐಟಿ ದಾಳಿ, ದಾಖಲೆ ಇಲ್ಲದ ಕೋಟ್ಯಾಂತರ ರೂ. ಹಣ ವಶ!

Most read

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ (Dr K Sudhakar)  ಆಪ್ತ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮಾದಾವರ ಗೋವಿಂದಪ್ಪ ಅವರ ನೆಲಮಂಗಲದ ನಿವಾಸದ ಮೇಲೆ ಐಟಿ ದಾಳಿಯಾಗಿದೆ. ಈ ವೇಳೆ ಕೋಟ್ಯಾಂತರ ರೂಪಾಯಿ ನಗದು ಹಣ ಹಾಗೂ ಚಿನ್ನಾಭರಣೆ ಪತ್ತೆಯಾಗಿದೆ.

ಮನೆಯಲ್ಲಿ ದಾಖಲೆ ಇಲ್ಲದೆ ಪತ್ತೆಯಾದ ಬರೋಬ್ಬರಿ 4 ಕೋಟಿ 80ಲಕ್ಷ ರೂ. ಹಣ ವಶಕ್ಕೆ ಪಡೆದುಕೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಸ್ಥಳಕ್ಕೆ ಬಂದು ಮಾಹಿತಿ ಪಡೆದುಕೊಂಡರು. 

More articles

Latest article