ಬೆಂಗಳೂರು: ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ (ಡಿಜಿ–ಐಜಿಪಿ) ಯಾಗಿ ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ.ಎ ಸಲೀಂ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ.
ಈ ಸಂಬಂಧ ಇಂದು ಅಧಿಸೂಚನೆ ಹೊರಡಿಸಲಾಗಿದೆ. ಸಲೀಂ ಅವರು ಮೇ 21ರಿಂದ ಪ್ರಭಾರ ಡಿಜಿ ಐಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಡಿಜಿ ಐಜಿಪಿಯಾಗಿ ನೇಮಕವಾದ ನಂತರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಅಭಿನಂದನೆ ಸಲ್ಲಿಸಿದರು.