ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸ್ಥಳದಲ್ಲೇ ಸಾವು!

ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕೆಂಗೇರಿ ಬಸ್​ ನಿಲ್ದಾಣದ ಬಳಿ ನಡೆದಿದೆ. ಸಂಧ್ಯಾ (30) ಮೃತ ದುರ್ದೈವಿ.

ಫ್ಯಾಷನ್ ಡಿಸೈನರ್ ಆಗಿರುವ ಸಂಧ್ಯಾ ಅವರು ಬಟ್ಟೆ ಅಂಗಡಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಶನಿವಾರ ಕೆಲಸ ಮುಗಿಸಿ ರಾತ್ರಿ 7 ಗಂಟೆ ಸುಮಾರಿಗೆ ಕೆಂಗೇರಿ ಬಸ್‌ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದರು. ಈ ವೇಳೆ ಮದ್ಯದ ಮತ್ತಿನಲ್ಲಿ ಬೆಂಜ್​ ಕಾರು ಚಲಾಯಿಸಿಕೊಂಡು ಬಂದ ಯುವಕ, ಸಂಧ್ಯಾರಿಗೆ ಡಿಕ್ಕಿ ಹೊಡೆದಿದ್ದಾನೆ. ಕಾರು ಸಂಧ್ಯಾ ಅವರನ್ನು 5 ಮೀಟರ್ ಉಜ್ಜಿಕೊಂಡು ಹೋಗಿದೆ. ಅಪಘಾತದ ರಭಸಕ್ಕೆ ಸಂಧ್ಯಾ ತಲೆಗೆ ತೀವ್ರ ಪೆಟ್ಟಾಗಿ, ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.

ಅಪಘಾತದ ಬಳಿಕ ಯುವಕ ಪರಾರಿಯಾಗಲು ಯತ್ನಿಸಿದ್ದಾನೆ. ಆಗ, ಸ್ಥಳೀಯರು ಯುವಕನನ್ನು ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದಾರೆ. ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಂಗೇರಿ ಬಸ್ ನಿಲ್ದಾಣದ ಮುಂದೆ ಬೆಂಜ್ ಕಾರು ಡಿಕ್ಕಿಯಾಗಿ 30 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಘಟನೆ ಬಳಿಕ ಕೇಸ್ ದಾಖಲು ಮಾಡಿ ಆರೋಪಿಯನ್ನು ಬಂಧಿಸಿದ್ದೇವೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ಹೇಳಿದ್ದಾರೆ.

ಚಾಲಕನ ಕುಡಿತ ಪರೀಕ್ಷೆ ಮಾಡಿದಾಗ ಆತ ಕುಡಿದು ವಾಹನ ಚಲಾವಣೆ ಮಾಡಿರುವುದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.

More articles

Latest article

Most read