ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಬಳಸಿ ಸ್ಫೋಟಿಸಿದ್ದ ಆರೋಪದ ಮೇಲೆ ಬಂಧಿತನಾಗಿರುವ ಡ್ರೋನ್ ಪ್ರತಾಪ್ ಗೆ ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯ ಡಿಸೆಂಬರ್. 26 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ತಾಲ್ಲೂಕಿನ ಐ.ಡಿ.ಹಳ್ಳಿ ಹೋಬಳಿಯ ಜನಕಲೋಟಿ ಗ್ರಾಮದ ರಾಯರ ಬೃಂದಾವನ ಫಾರ್ಮ್‌ನ ಕೃಷಿ ಹೊಂಡದಲ್ಲಿ ಡ್ರೋನ್ ಪ್ರತಾಪ್ ಕಳೆದ ವಾರ
ಸೋಡಿಯಂ ಬಳಸಿ ಸ್ಫೋಟಿಸಿದ್ದರು. ಇದನ್ನು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಮಿಡಿಗೇಶಿ ಠಾಣೆ ಪೊಲೀಸರು ಬಂಧಿಸಿದ್ದರು. ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಿ ವಿಚಾರಣೆಗಾಗಿ ಪೊಲೀಸರು ಡ್ರೋನ್ ಪ್ರತಾಪ್ ನನ್ನು ತಮ್ಮ ವಶಕ್ಕೆ ಪಡೆದಿದ್ದರು. ಅವಧಿ ಮುಗಿದ ಹಿನ್ನೆಲೆಯಲ್ಲಿ ಸೋಮವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ
ಒಪ್ಪಿಸಲಾಗಿದೆ.