ಇ-ಸ್ವತ್ತು: ಸಾರ್ವಜನಿಕರ ದೂರುಗಳನ್ನು ತ್ವರಿತವಾಗಿ ಬಗೆಹರಿಸಲು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

Most read

ಬೆಂಗಳೂರು: ಇ-ಸ್ವತ್ತು ಸೌಲಭ್ಯವನ್ನು ಜಾರಿಗೊಳಿಸುವಲ್ಲಿ ಎದುರಾಗಿರುವ ಸಮಸ್ಯೆಗಳನ್ನು ನಿವಾರಿಸಲು, ಜಿಲ್ಲಾ ಮಟ್ಟದಲ್ಲಿ ತೆಗೆದುಕೊಳ್ಳಲಾಗಿರುವ ಕ್ರಮಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಇಂದು ರಾಜ್ಯದ ಗ್ರಾಮ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.

ಇ-ಸ್ವತ್ತು ತಂತ್ರಾಂಶದಲ್ಲಿನ ಕೆಲವು ಲೋಪಗಳ ಬಗ್ಗೆ ಕೆಲವು ಸಿಇಒಗಳೊಂದಿಗೆ ಮಾಹಿತಿ ಪಡೆಯಲಾಗಿದೆ. ಗ್ರಾಮೀಣ ಜನರು ಈ ಯೋಜನೆಯ ಬಗ್ಗೆ ಹೆಚ್ಚಿನ ಆಸಕ್ತಿ ತೋರಿದ್ದು, ಸಾರ್ವಜನಿಕರಿಂದ ಬರುವ ದೂರುಗಳ ಬಗ್ಗೆ ವಿಶೇಷ ಆಸಕ್ತಿವಹಿಸಿ ಬಗೆಹರಿಸಬೇಕು. ತಂತ್ರಾಂಶವನ್ನು ಎನ್.ಐ.ಸಿ ಸಿದ್ಧಪಡಿಸಿದ್ದು ಲೋಪಗಳನ್ನು ಸರಿಪಡಿಸಬೇಕು ಎಂದು ಹೇಳಿದರು.

ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಇ-ಸ್ವತ್ತು ಸಹಾಯವಾಣಿ ಸಂಖ್ಯೆಗಳನ್ನು ಪ್ರದರ್ಶಿಸಲು ತಕ್ಷಣದ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ ಸಚಿವರು ಇ-ಸ್ವತ್ತು ಬಗ್ಗೆ ಬರುವ ಯಾವುದೇ ದೂರುಗಳನ್ನು ಆದ್ಯತೆಯ ಮೇಲೆ ಪರಿಹರಿಸಿ ಅರ್ಜಿದಾರರಿಗೆ ಮಾಹಿತಿ ನೀಡಬೇಕೆಂದು ನಿರ್ದೇಶಿಸಿದರು.

More articles

Latest article