ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದಾಖಲಾಗಿರುವ ಲೋಕಾಯುಕ್ತ ಎಫ್‌ಐಆರ್ ಆಧರಿಸಿ ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ ECIR ದಾಖಲಿಸಿದೆ.
ಸಿದ್ದರಾಮಯ್ಯ ಅವರನ್ನು ಬಂಧಿಸಲು ಇಡಿ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ವಿವಿಧ ಸೆಕ್ಷನ್ ಗಳಡಿ ಇಸಿಐಆರ್ ದಾಖಲಿಸಿರುವ ನಿರೀಕ್ಷೆ ಇದೆ. ಈ ಸಂಬಂಧ ಕೇಂದ್ರ ತನಿಖಾ ಸಂಸ್ಥೆಯು ಲೋಕಾಯುಕ್ತ ಪೊಲೀಸ್ ಎಫ್‌ಐಆರ್ ಅನ್ನು ಅಧ್ಯಯನ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ. ಇಸಿಐಆರ್ ಪೊಲೀಸ್ ಎಫ್ಐಆರ್ ಸಮನಾಗಿರುತ್ತದೆ.
ಲೋಕಾಯುಕ್ತ ಎಫ್ ಐ ಆರ್ ಆಧರಿಸಿ ಜಾರಿ ಪ್ರಕರಣ ಮಾಹಿತಿ ವರದಿ ಆಧರಿಸಿ ಇಂದು ರಾತ್ರಿ ಅಥವಾ ಮಂಗಳವಾರ ಪ್ರಕರಣ ದಾಖಲಿಸಿಕೊಳ್ಳಲಿದೆ.