ಮುಡಾ ಪ್ರಕರಣದಲ್ಲಿ ಇಡಿ ಬಂದಿರುವುದೇ ಸಿಎಂ ಸಿದ್ದರಾಮಯ್ಯ ಅವರನ್ನ ಸಿಕ್ಕಿಹಾಕಿಸಬೇಕು ಎಂಬ ದುರುದ್ದೇಶದಿಂದ. ಇಂತಹ ನಡವಳಿಕೆಗಳಿಗಾಗಿ ಇಡಿ ಜನರ ವಿಶ್ವಾಸವನ್ನ ಕಳೆದುಕೊಂಡಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸಚಿವರು, ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ ಸಂಬಂಧ ಪ್ರತಿಕ್ರಿಯೆ ನೀಡಿದ ಸಚಿವರು, ಇಡಿ ಒಂದು ಸ್ವಾಯತ್ತ ಸಂಸ್ಥೆಯಾಗಿ ಕೆಲಸ ಮಾಡುತ್ತಿಲ್ಲ. ಕೇಂದ್ರದ ಕೈಗೊಂಬೆಯಾಗಿದೆ. ಕಳೆದ 10 ವರ್ಷದಲ್ಲಿ ಬಿಜೆಪಿಯವರ ಬಂಧನವಾಗಿದೆಯಾ? ವಿಪಕ್ಷ ನಾಯಕರು ಇರುವಲ್ಲಿಗೆ ಇಡಿ, ಐಟಿ ಛೂ ಬಿಡ್ತಾರೆ ಎಂದರು.
ವಿರೋಧ ಪಕ್ಷದ ನಾಯಕರು ಇರುವ ಕಡೆ ಇಡಿ ಸಿಬಿಐನವರು ಬರ್ತಾರೆ. ಕೆಜ್ರಿವಾಲ್, ಸೂರೇನ್, ಡಿಕೆಶಿಯನ್ನು ಜೈಲಿಗೆ ಹಾಕಿದ್ರು. ಯಡಿಯೂರಪ್ಪ, ವಿಜಯೇಂದ್ರ ಯಾಕೆ ಕಣ್ಣಿಗೆ ಕಾಣಲ್ಲ.? ಈ ಕಾನೂನು ದುರ್ಬಳಕೆ ಆಗುತ್ತಿದೆ. ಹೇಗಾದರು ಸರಿ ಸಿಎಂ ಅವರನ್ನು ಸಿಕ್ಕಿಸಬೇಕು ಎಂದು ವ್ಯವಸ್ಥಿತವಾದ ಸಂಚು ನಡೆದಿದೆ. ಪ್ರೀ ಪ್ಲಾನ್ ಮಾಡಲಾಗಿದೆ. ಸಿಎಂ ಅವರ ಹೆಸರು ಹೇಳಲು ಇಡಿ ಒತ್ತಡ ಹಾಕಿದ್ರು ಎಂದು ಮಾಜಿ ಸಚಿವ ನಾಗೇಂದ್ರ ಕೂಡ ಹೇಳಿದ್ದಾರೆ. ಹೆದರಿಸುವ ಕೆಲಸ ಇಡಿ ಮಾಡುತ್ತಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.