ದೆಹಲಿ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಡಿ ಅಧಿಕಾರಿ ಅಲೋಕ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಭ್ರಷ್ಟಾಚಾರದ ಪ್ರಕರಣದಲ್ಲಿ ತನ್ನ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ದೆಹಲಿ ಹತ್ತಿರದ ಸಾಹಿಬಾಬಾದ್ ರೈಲ್ವೇ ಹಳಿ ಮೇಲೆ ಅಲೋಕ್ ಕುಮಾರ್ ಅವರ ಮೃತದೇಹ ಪತ್ತೆಯಾಗಿದೆ.
ಇಡಿ ಅಧಿಕಾರಿ ಸಂದೀಪ್ ಸಿಂಗ್ 50 ಲಕ್ಷ ರೂ. ಬೇಡಿಕೆ ಇಟ್ಟಿದ್ದಾರೆಂದು ಒಬ್ಬ ವ್ಯಕ್ತಿ ಪ್ರಕರಣ ದಾಖಲಿಸಿದ್ದರು. ಈ ಭ್ರಷ್ಟಾಚಾರದ ಪ್ರಕರಣದಲ್ಲಿ ಸಂದೀಪ್ ಸಿಂಗ್ ಅವರ ಮಗ 20 ಲಕ್ಷ ರೂ. ಲಂಚ ಸ್ವಿಕರಿಸುವಾಗ ಸಿಬಿಐ ಬಂಧಿಸಿತ್ತು. ಇದೇ ಪ್ರಕರಣದಲ್ಲಿ ಅಲೋಕ್ ಕುಮಾರ್ ಅವರ ಹೆಸರು ಕೂಡ ಕೇಳಿ ಬಂದಿತ್ತು.
ಇತ್ತೀಚಿಗೆ ಅವರನ್ನು ಸಿಬಿಐ ಭ್ರಷ್ಟಾಚಾರದ ಆರೋಪದಡಿಯಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ಆದರೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ಅಲೋಕ್ ಅವರನ್ನು ಬಿಡುಗಡೆಗೊಳಿಸಿತ್ತು.