ಮುಡಾ ಕುರಿತ ಇಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ

Most read

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕುರಿತು ಜಾರಿ ನಿರ್ಧೇಶನಾಲಯ(ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪಾದಿಸಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮುಡಾ ಹಗರಣ ಕುರಿತು ಇಡಿಯವರು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಗ್ಗೆ ಪ್ರತಿಕ್ರಿಯೆ  ವ್ಯಕ್ತಪಡಿಸಿದ ಅವರು ಇಡಿ ಹೊರಡಿಸಿರುವ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ಬಿಜೆಪಿಯವರೇ ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಇಡಿಯವರ ಮೂಲಕ ಬಿಡುಗಡೆ  ಮಾಡಿಸಿದ್ದಾರೆ ಎಂದು ಆಪಾದಿಸಿದರು. ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣ ಕುರಿತು ಪ್ರತಿಪಕ್ಷಗಳ ಆರೋಪ ಹಾಗೂ ರಾಜ್ಯದ ತೆರಿಗೆ ಹಣದಲ್ಲಿ ನಾಳಿನ ಸಮಾರಂಭ ನಡೆಸುತ್ತಿರುವ ಬಗ್ಗೆ ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಣ ದುರುಪಯೋಗ ಆಗಿರುವ ಪ್ರಶ್ನೆಯೇ ಇಲ್ಲ ಎಂದರು. ವಿಜಯಪುರದಲ್ಲಿ ಕಾರ್ಮಿಕರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ‍್ಳಲಾಗುವುದು ಎಂದು ಭರವಸೆ ನೀಡಿದರು.

ಮೈಸೂರು, ಚಾಮರಾಜನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ಹೆಚ್ಚಿದ್ದು, ಜನರಿಗೆ ಕಿರುಕುಳ  ನೀಡುತ್ತಿರುವ ವಿಷಯ ಗಮನಕ್ಕೆ ಬಂದಿದೆ. ಜನರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ದಂಧೆ ನಡೆಸುತ್ತಿರುವ ಸಂಸ್ಥೆಯ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದರು. 1924ರ ಬೆಳಗಾವಿ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಸ್ಮರಣಾರ್ಥವಾಗಿ ಮಹಾತ್ಮಾ ಗಾಂಧೀಜಿ ಪ್ರತಿಮೆ ಅನಾವರಣ ನಂತರ ಸಾರ್ವಜನಿಕ ಸಭೆ ನಡೆಸಲಾಗುವುದು ಎಂದೂ ತಿಳಿಸಿದರು.

More articles

Latest article