ಬಳ್ಳಾರಿಯ ಕಾಂಗ್ರೆಸ್‌ ಶಾಸಕ, ಸಂಸದರ ನಿವಾಸಗಳ‌ ಮೇಲೆ ಇ.ಡಿ ದಾಳಿ; ದಾಖಲೆ ಪರಿಶೀಲನೆ

ಬಳ್ಳಾರಿ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ವಾಲ್ಮೀಕಿ ನಿಗಮದ ಹಣ ದುರ್ಬಳಕೆಯಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಜನಪ್ರತಿನಿಧಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ( ಇ.ಡಿ) ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ.

ಬಳ್ಳಾರಿ ಲೋಖಸಭಾ ಸದಸ್ಯ  ಇ. ತುಕಾರಾಂ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಕಂಪ್ಲಿ ಶಾಸಕ ಜೆ.ಎನ್ ಗಣೇಶ್, ಶಾಸಕ ಬಿ. ನಾಗೇಂದ್ರ ಅವರ ಆಪ್ತ ಗೋವರ್ಧನ್ ರೆಡ್ಡಿ ಕೂಡ್ಲಿಗಿ ಶಾಸಕ ಶ್ರೀನಿವಾಸ್​ ಸೇರಿದಂತೆ ಹಲವು ಮುಖಂಡರಿಗೆ  ಸಂಬಂಧಿಸಿದ ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ. ಇವರೆಲ್ಲರೂ ಕಾಂಗ್ರೆಸ್‌ ಪಕ್ಷದ ಶಾಸಕರಾಗಿದ್ದಾರೆ ಎನ್ನುವುದು ವಿಶೇಷ. ಇ.ಡಿ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಯಾವ ಕಾರಣಕ್ಕೆ ದಾಳಿ ನಡೆದಿದೆ ಎನ್ನುವದು ಖಚಿತವಾಗಿಲ್ಲವಾದರೂ  ವಾಲ್ಮೀಕಿ ನಿಗಮದ ಹಗರಣದ ತನಿಖೆಯ ಭಾಗವಾಗಿರಬಹುದು ಎಂದು ಹೇಳಲಾಗುತ್ತಿದೆ. ವಾಲ್ಮೀಕಿ ನಿಗಮದ ಹಣವನ್ನು ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಬಳಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

ಕೂಡ್ಲಿಗಿ ತಾಲ್ಲೂಕಿನ ನರಸಿಂಹಗಿರಿಯಲ್ಲಿರುವ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರ ಮನೆಯ ಮೇಲೆ ಬೆಳಿಗ್ಗೆ 5 ಗಂಟೆ ಸುಮಾರಿಗೆ ಬೆಳಿಗ್ಗೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಮನೆಯಲ್ಲಿ ಶಾಸಕರ ತಾಯಿ ಮಾತ್ರ ಇದ್ದು, ಒಳಗೆ ಯಾರನ್ನೂ ಬಿಡದೆ ಮನೆ ಸುತ್ತ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಮಂಗಳವಾರ ಇಡೀ ದಿನ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಶಾಸಕರು ಸಂಜೆ ತುಮಕೂರಿಗೆ ಹೋಗಿದ್ದರು. ಆದರೆ ಅವರು ಇನ್ನೂ ತುಮಕೂರಿನಲ್ಲೇ ಇದ್ದಾರೆ. ಶಾಸಕರ ಮನೆ ಮೇಲೆ ಇ.ಡಿ ದಾಳಿ ಮಾಡಿರುವುದನ್ನು ಅವರ ಅಪ್ತರು ಖಚಿತಪಡಿಸಿದ್ದಾರೆ.

ಇಡಿ ದಾಳಿಯನ್ನು ಖಂಡಿಸಿರುವ ಕಾಂಗ್ರೆಸ್‌ ನಾಯಕರು ಇದು ರಾಜಕೀಯ ಪ್ರೇರಿತ ಎಂದು ಟೀಕಿಸಿದ್ದಾರೆ.

More articles

Latest article

Most read