ಬೆಂಗಳೂರು : ಪಶುವೈದ್ಯ ಅಧಿಕಾರಿಗಳ ನೇಮಕಾತಿ ಸಂಬಂಧ ಇಡಿ ಅಧಿಕಾರಿಗಳು ಕೆಪಿಎಸ್‌ಸಿ ಕಚೇರಿ ಹಾಗೂ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 13 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಅಕ್ರಮ ಹಣ ವರ್ಗಾವಣೆ ನಡೆದಿರುವ ಅನುಮಾನದ ಹಿನ್ನಲೆ ಕೆಪಿಎಸ್‌ಸಿ ಹಗರಣದ ಮಧ್ಯವರ್ತಿಗಳ ಮೇಲೂ ದಾಳಿ ನಡೆದಿದೆ.
ಕಲಬುರಗಿಯ ಹೊಯ್ಸಳ ಡ್ರೀಮ್ಸ್ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಯ್ಲಾಟ್‌ನಲ್ಲೂ ಪರಿಶೀಲನೆ ನಡೆದಿದೆ.

