ಮುಡಾ ಕಚೇರಿಯಲ್ಲಿ ಮುಂದುವರಿದ ಇಡಿ ಶೋಧ; ಅಧಿಕಾರಿಗಳಿಗೆ ಪ್ರಶ್ನೆಗಳ ಸುರಿಮಳೆ

Most read

ಇಡಿ ಅಧಿಕಾರಿಗಳು ಮೈಸೂರಿನ ಮುಡಾ ಕಚೇರಿಯಲ್ಲಿ ತಪಾಸಣೆಯನ್ನು ಮುಂದುವರೆಸಿದ್ದಾರೆ. ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ. ಅಧಿಕಾರಿಗಳಿಗೆ ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಎಂದು ತಿಳಿದು ಬಂದಿದೆ.


ಹಿಂದಿನ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ನವೆಂಬರ್ 27, 2023 ರಂದು ಬರೆದಿರುವ ಪತ್ರದ ಆಧಾರದಲ್ಲಿ ಪ್ರಶ್ನೆಗಳನ್ನು ಇಡಿ ಅಧಿಕಾರಿಗಳು ಕೇಳುತ್ತಿದ್ದಾರೆ.


ಇತ್ತ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರೊಂದಿಗೆ ನಿರಂತರವಾಗಿ ಚರ್ಚೆ ನಡೆಸುತ್ತಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರೊಂದಿಗೆ
ಮಾತುಕತೆ ನಡೆಸಿದ್ದಾರೆ.

More articles

Latest article