ಅಕ್ರಮ ಹಣ ವರ್ಗಾವಣೆ (money laundering case) ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾಷ್ಟ್ರೀಯ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ (Farooq Abdullah ) ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.
86 ವರ್ಷದ ಹಿರಿಯ ರಾಜಕಾರಣಿ ಶ್ರೀನಗರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಇವರ ಅಧಿಕಾರವಧಿಯಲ್ಲಿ ಜಮ್ಮು ಕಾಶ್ಮೀರ ಕ್ರಿಕೆಟ್ ಸಂಸ್ಥೆಯಲ್ಲಿ ಅಕ್ರಮವಾಗಿ ಹಣದ ವರ್ಗಾವಣೆ ನಡೆದಿದೆ ಎಂದು ಇಡಿ ಅಧಿಕಾರಿಗಳು ಆರೋಪಿಸಿದ್ದರು. 2022ರಲ್ಲಿ ದಾಖಲಿಸಲಾದ ಚಾರ್ಜ್ಶೀಟ್ನಲ್ಲಿ ಫಾರೂಖ್ರನ್ನು ಆರೋಪಿಯನ್ನಾಗಿ ಹೆಸರಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ಜೆಕೆಸಿಎ ಅಧ್ಯಕ್ಷ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಕ್ರಿಕೆಟ್ ಸಂಸ್ಥೆಯ ಅನುದಾನವನ್ನು ಪದಾಧಿಕಾರಿಗಳ ಬ್ಯಾಂಕ್ ಖಾತೆ ಸೇರಿ, ಅಪರಿಚಿತ ವ್ಯಕ್ತಿಗಳ ವೈಯಕ್ತಿಕ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ. ಯಾವುದೇ ಕಾರಣಗಳಿಲ್ಲದೇ, ಹಣ ವರ್ಗಾವಣೆ ಮಾಡಿ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಇಡಿ ಚಾರ್ಜ್ಶೀಟ್ನಲ್ಲಿ ಆರೋಪಿಸಿದೆ.
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಅಬ್ದುಲ್ಲಾ ಅವರನ್ನು ಶ್ರೀನಗರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಇಡಿ ಅವರನ್ನು ಪದಚ್ಯುತಗೊಳಿಸುವಂತೆ ಸಮನ್ಸ್‌ನಲ್ಲಿ ತಿಳಿಸಲಾಗಿದೆ.