Wednesday, May 22, 2024

ಅಕ್ರಮ ಹಣ ವರ್ಗಾವಣೆ ಪ್ರಕರಣ : ವಿಚಾರಣಗೆ ಹಾಜರಾಗುವಂತೆ ಫಾರೂಕ್ ಅಬ್ದುಲ್ಲಾಗೆ ಇಡಿ ಸಮನ್ಸ್

Most read

ಅಕ್ರಮ ಹಣ ವರ್ಗಾವಣೆ (money laundering case) ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾಷ್ಟ್ರೀಯ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ (Farooq Abdullah ) ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.

86 ವರ್ಷದ ಹಿರಿಯ ರಾಜಕಾರಣಿ ಶ್ರೀನಗರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಇವರ ಅಧಿಕಾರವಧಿಯಲ್ಲಿ ಜಮ್ಮು ಕಾಶ್ಮೀರ ಕ್ರಿಕೆಟ್​ ಸಂಸ್ಥೆಯಲ್ಲಿ ಅಕ್ರಮವಾಗಿ ಹಣದ ವರ್ಗಾವಣೆ ನಡೆದಿದೆ ಎಂದು ಇಡಿ ಅಧಿಕಾರಿಗಳು ಆರೋಪಿಸಿದ್ದರು. 2022ರಲ್ಲಿ ದಾಖಲಿಸಲಾದ ಚಾರ್ಜ್​ಶೀಟ್​ನಲ್ಲಿ ಫಾರೂಖ್​ರನ್ನು ಆರೋಪಿಯನ್ನಾಗಿ ಹೆಸರಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ಜೆಕೆಸಿಎ ಅಧ್ಯಕ್ಷ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಕ್ರಿಕೆಟ್​ ಸಂಸ್ಥೆಯ ಅನುದಾನವನ್ನು ಪದಾಧಿಕಾರಿಗಳ ಬ್ಯಾಂಕ್​ ಖಾತೆ ಸೇರಿ, ಅಪರಿಚಿತ ವ್ಯಕ್ತಿಗಳ ವೈಯಕ್ತಿಕ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ. ಯಾವುದೇ ಕಾರಣಗಳಿಲ್ಲದೇ, ಹಣ ವರ್ಗಾವಣೆ ಮಾಡಿ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಇಡಿ ಚಾರ್ಜ್​ಶೀಟ್​ನಲ್ಲಿ ಆರೋಪಿಸಿದೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಅಬ್ದುಲ್ಲಾ ಅವರನ್ನು ಶ್ರೀನಗರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಇಡಿ ಅವರನ್ನು ಪದಚ್ಯುತಗೊಳಿಸುವಂತೆ ಸಮನ್ಸ್‌ನಲ್ಲಿ ತಿಳಿಸಲಾಗಿದೆ.

More articles

Latest article