ಶಾಲೆಗಳಲ್ಲಿ ಅಸಭ್ಯ, ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡದಂತೆ ಶಿಕ್ಷಣ ಇಲಾಖೆ ಆದೇಶ

ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಮೌಲ್ಯಗಳನ್ನು ಬೆಳಸುವಂತಹ ಹಾಡುಗಳನ್ನು ಆಯ್ಕೆಗೆ ಸೂಚನೆ

ಬೆಂಗಳೂರು: ಇತ್ತೀಚೆಗೆ ಶಾಲೆಗಳಲ್ಲಿ ಮಕ್ಕಳು ಹಾಗೂ ಪೋಷಕರನ್ನು ರಂಜಿಸುವ ಸಲುವಾಗಿ ಅಶ್ಲೀಲ ಹಾಗೂ ಅಸಭ್ಯ ಹಾಡುಗಳಿಗೆ ನೃತ್ಯ ಮಾಡಿಸುತ್ತಿರುವುದು ಹೆಚ್ಚಾಗುತ್ತಲೇ ಇದೆ. ಇದಕ್ಕೆ ಕಡಿವಾಣ ಹಾಕುವ ಸಲುವಾಗಿ ಶಿಕ್ಷಣ ಇಲಾಖೆ
ಕ್ರಮಕ್ಕೆ ಮುಂದಾಗಿದೆ.

ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳು ಅಶ್ಲೀಲ ಮತ್ತು ಅಸಭ್ಯ ಹಾಡುಗಳಿಗೆ ನೃತ್ಯ ಮಾಡಿಸುವುದನ್ನು ನಿಷೇಧಿಸಿ ಪ್ರಾಥಮಿಕ ಶಾಲಾ ಶಿಕ್ಷಣ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ವಿದ್ಯಾರ್ಥಿ, ವಿದ್ಯಾರ್ಥಿನಿಯರು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಾಗ ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡುವುದನ್ನು ಕಟ್ಟು ನಿಟ್ಟಾಗಿ ನಿರ್ಬಂಧಿಸಬೇಕು ಎಂದು ಶಿಕ್ಷಣ ಇಲಾಖೆಯು ತನ್ನೆಲ್ಲಾ ಜಿಲ್ಲಾ ಉಪ ನಿರ್ದೇಶಕರಿಗೆ ನಿರ್ದೇಶನ ನೀಡಿದೆ.

ಶಾಲೆಯಲ್ಲಿ ಕಲಿಸಿದ ಉತ್ತಮ ಶಿಕ್ಷಣದಿಂದಾಗಿ, ಇಂದಿನ ಮಕ್ಕಳೇ ನಾಳಿನ ಉತ್ತಮ ಪ್ರಜೆಗಳಾಗುವರು. ಅಂತಹ ವಿದ್ಯಾರ್ಥಿಗಳಿಂದ ಶಾಲೆಗಳಲ್ಲಿ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಾಗ ಕೆಲವು ವೇಳೆ ಅಶ್ಲೀಲ ಹಾಡುಗಳು ಮತ್ತು ನೃತ್ಯಗಳನ್ನು ಪ್ರದರ್ಶಿಸಲಾಗುತ್ತದೆ. ಈ ರೀತಿ ನೃತ್ಯಗಳನ್ನು ಪ್ರದರ್ಶಿಸಿದ ಮಕ್ಕಳ ಮಾನಸಿಕ ಆರೋಗ್ಯ ಮತ್ತು ನೈತಿಕ ಮೌಲ್ಯಗಳ ಮೇಲೆ ಕೆಟ್ಟ ಪರಿಣಾಮ ಬೀರಿದಂತಾಗುತ್ತದೆ ಹಾಗೂ ಅಶ್ಲೀಲ ಮೂಡಿಸಿದಂತಾಗುತ್ತದೆ. ಹಾಗೂ ಶಿಕ್ಷಣದ ಪಾವಿತ್ರ್ಯತೆಗೆ ಧಕ್ಕೆ ಉಂಟು ಮಾಡಿದಂತಾಗುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಆದ್ದರಿಂದ ಮಕ್ಕಳಿಗೆ ಸ್ಫೂರ್ತಿದಾಯಕ, ಸಕಾರಾತ್ಮಕ, ರಾಷ್ಟ್ರಾಭಿಮಾನ ಮೂಡಿಸುವ, ಕನ್ನಡ ನಾಡಿನ ಹಿರಿಮೆ, ಗರಿಮೆ, ಮೌಲ್ಯಾಧಾರಿತ ಸಂಸ್ಕಾರ, ನೈತಿಕತೆ, ಇರುವಂತಹ ಹಾಡುಗಳನ್ನು ಆಯ್ಕೆ ಮಾಡಬೇಕು. ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಮತ್ತು ನೈತಿಕ ಮೌಲ್ಯಗಳನ್ನು ಬೆಳಸುವಂತಹ ಹಾಡುಗಳನ್ನು ಆಯ್ಕೆ ಮಾಡಬೇಕು ಎಂದು ಸೂಚಿಸಲಾಗಿದೆ.

ಹಾಡುಗಳ ಮತ್ತು ನೃತ್ಯಗಳ ಆಯ್ಕೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕರು, ಶಾಲಾ ಆಡಳಿತ ಮಂಡಳಿ ಜವಾಬ್ದಾರಿಯನ್ನು ನಿಭಾಯಿಸಬೇಕು, ವಿದ್ಯಾರ್ಥಿಗಳು ನೃತ್ಯ ಕಾರ್ಯಕ್ರಮಗಳಲ್ಲಿ ಅಥವಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಭ್ಯ ಉಡುಪುಗಳನ್ನು ಧರಿಸಲು ಕ್ರಮವಹಿಸಬೇಕು ಎಂದು ಸೂಚಿಸಲಾಗಿದೆ.

More articles

Latest article

Most read