ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಮೂವರು ಆರೋಪಿಗಳಿಗೆ ಮೂರನೇ ಎಸಿಎಂಎಂ ನ್ಯಾಯಾಲಯದಿಂದ ಜಾಮೀನು ಲಭ್ಯವಾಗಿದೆ. ಮುನಿರತ್ನ ನಂದಿನಿ ಲೇ ಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು 150 ಅನಾಮಿಕ ವ್ಯಕ್ತಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್ ಎಸ್) 115(2), 189,190 ಅಡಿ ಎಫ್ ಐ ಆರ್ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಅಶ್ವಥ್, ವಿಶ್ವಮೂರ್ತಿ ಮತ್ತು ವಿಶ್ವ ಮೂವರನ್ನು ಪೊಲೀಸರು ಬಂಧಿಸಿದ್ದರು.
ವಕೀಲರಾದ ಸೂರ್ಯ ಮುಕುಂದರಾಜ್ ಮತ್ತು ಸಂಜಯ್ ಯಾದವ್ ಆರೋಪಿಗಳ ಪರ ಹಾಜರಿದ್ದರು 4500 ರೂ. ಶ್ಯೂರಿಟಿ, 50,000 ರೂ. ಬಾಂಡ್ ಮತ್ತು ನ್ಯಾಯಾಲಯದ ವ್ಯಾಪ್ತಿಯನ್ನು ಬಿಟ್ಟು ಹೋಗದಂತೆ ಷರತ್ತು ವಿಧಿಸಲಾಗಿದೆ.