ಬಿಬಿಎಂಪಿಗೆ ಶೀಘ್ರ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಬೃಹತ್ ಬೆಂಗಳುರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಆದಷ್ಟು ಬೇಗನೆ ಚುನಾವಣೆ ನಡೆಸಲಾಗುತ್ತದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಚುನಾವಣೆ ನಡೆಸಲು ಸರ್ಕಾರ ಸಿದ್ದತೆ ಮಾಡಿಕೊಂಡಿದೆ. ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಗೆ ವಿಧಾನಮಂಡಲದಲ್ಲಿ ಈಗಾಗಲೇ ಒಪ್ಪಿಗೆ ಸಿಕ್ಕಿದೆ. ಜಂಟಿ ಸದನ ಸಮಿತಿ ಹಾಗೂ ಅನೇಕರು ತಮ್ಮ ಸಲಹೆಗಳನ್ನು ನೀಡಿದ್ದಾರೆ. ರಾಜ್ಯಪಾಲರು ಮಸೂದೆಗೆ ಎಷ್ಟು ಬೇಗ ಸಹಿ ಹಾಕಿ ಕಳುಹಿಸುತ್ತಾರೋ ಅಷ್ಟು ಬೇಗ ಪ್ರದೇಶಗಳನ್ನು ಗುರುತಿಸಿ ಶಾಸಕರ ಬಳಿ ಮತ್ತೊಮ್ಮೆ ಚರ್ಚೆ ಮಾಡಿ ಚುನಾವಣೆ ಮಾಡಲಾಗುತ್ತದೆ. ಸಂವಿಧಾನದ 73 74ನೇ ತಿದ್ದುಪಡಿ ಬಗ್ಗೆ ನಮಗೆ ಬದ್ಧತೆಯಿದೆ ಎಂದು ತಿಳಿಸಿದರು.
ಬಿಬಿಎಂಪಿಗೆ ಕಳೆದ ಐದು ವರ್ಷಗಳಿಂದ ಚುನಾವಣೆ ನಡೆದಿಲ್ಲ. ಎಲ್ಲ ಪಕ್ಷಗಳ ಸರ್ಕಾರಗಳೂ ಒಂದಿಲ್ಲೊಂದು ಕಾರಣವನ್ನು ಮುಂದಿಟ್ಟುಕೊಂಡು ಚುನಾವನೆಯನ್ನು ಮುಂದೂಡುತ್ತಾ ಬಂದಿವೆ.