Thursday, December 12, 2024

ಚುನಾವಣೆ: ಚನ್ನಪಟ್ಟಣದಲ್ಲಿ ಸೂಕ್ತ ಬಂದೋಬಸ್ತ್

Most read

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 276 ಮತಗಟ್ಟೆ ಸ್ಥಾಪಿಸಲಾಗಿದೆ. ಎಲ್ಲಾ ಮತಗಟ್ಟೆಗಳಿಗೆ ವೆಬ್ ಕಾಸ್ಟಿಂಗ್ ಪ್ರಕ್ರಿಯೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. 119 ಮೈಕ್ರೋ ವೀಕ್ಷಕರನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ತಿಳಿಸಿದ್ದಾರೆ.

ಈಗಾಗಲೇ 8 ಪ್ಯಾರಾ ಮಿಲಿಟರಿ ತಂಡ ಆಗಮಿಸಿದ್ದು, ಅದರಲ್ಲಿ ಏಳು ಪ್ಯಾರಾ ಮಿಲಿಟರಿ ಪಡೆಯನ್ನು 197 ಮತಗಟ್ಟೆಗಳ ಬಂದೋಬಸ್ತ್‌ಗೆ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ತಿಳಿಸಿದರು. 119 ಸೂಕ್ಷ್ಮ ಮತಗಟ್ಟೆ ಸ್ಥಾಪಿಸಲಾಗಿದೆ. ಒಂಬತ್ತು ಅಬಕಾರಿ ಪ್ರಕರಣಗಳು ದಾಖಲಾಗಿದ್ದು, 676 ಸೀರೆ ಜಪ್ತಿ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ವ್ಯವಸ್ಥಾಪಕ ಹಾಗೂ ಮತ್ತೊಬ್ಬರ ಮೇಲೆ ಎಫ್ಐಆರ್ ದಾಖಲಾಗಿದೆ.


ಮೂರೂ ಕ್ಷೇತ್ರಗಳಲ್ಲಿ ಪಾರದರ್ಶಕ ಚುನಾವಣೆಗೆ ಎಲ್ಲಾ ಹಂತದಲ್ಲಿ ಇವಿಎಂ ಮತಯಂತ್ರಗಳನ್ನು ಪರಶೀಲನೆ ನಡೆಸಲಾಗಿದ್ದು ಯಾವುದೇ ಗೊಂದಲ ಇಲ್ಲ ಎಂದು ಜಿಲ್ಲಾದಿಕಾರಿಗಳು ತಿಳಿಸಿದ್ದಾರೆ.


ನಿಷೇದಾಜ್ಞೆ ಜಾರಿ:


ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನ.12ರ ಮಂಗಳವಾರ ಸಂಜೆ 6 ಗಂಟೆಯಿಂದ ನ.14ರ ಗುರುವಾರ ಬೆಳಿಗ್ಗೆ 6 ಗಂಟೆಯವರೆಗೆ ವಿವಿಧ ಷರತ್ತುಗಳನ್ನು ವಿಧಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಇಂದು ಸಂಜೆ 6 ಗಂಟೆಯಿಂದ ನ.14ರ ಗುರುವಾರ ಬೆಳಿಗ್ಗೆ 6 ಗಂಟೆಯವರೆಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಾದ್ಯಂತ ಎಲ್ಲಾ ರೀತಿಯ ಮದ್ಯ ಮಾರಾಟ ಹಂಚಿಕೆ ಸಾಗಾಣಿಕೆ ನಿಷೇಧಿಸಿ ಶುಷ್ಕ ದಿನ ಎಂದು ಘೋಷಿಸಿ ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದು ಎಂದು ಅವರು ಹೇಳಿದ್ದಾರೆ.

More articles

Latest article