ದೇವಸ್ಥಾನದಲ್ಲಿ ಚುನಾವಣಾ ಪ್ರಚಾರ ಸಭೆ: ಕಾಪು ಶಾಸಕನ ಮೇಲೆ ಪ್ರಕರಣ ದಾಖಲು

ಕಾಪು: ದೇವಸ್ಥಾನದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿದ ಆರೋಪದ ಮೇರೆಗೆ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಮೇಲೆ ಪ್ರಕರಣ ದಾಖಲಾಗಿದೆ.

ಬಿಜೆಪಿ ಶಾಸಕ ಸುರೇಶ್‌ ಶೆಟ್ಟಿ, ಶಿರ್ವ ಜಾರಂದಾಯ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಸೇರಿಸಿ ಚುನಾವಣಾ ಪ್ರಚಾರ ಸಭೆ ನಡೆಸುತ್ತಿದ್ದರು. ಚುನಾವಣಾ ಆಯೋಗದ ಫ್ಲೈಯಿಂಗ್‌ ಸ್ಕ್ವಾಡ್‌ ಗಮನಕ್ಕೆ ಶಾಸಕ ಸೇರಿದಂತೆ ಹಲವರ ವಿರುದ್ಧ ದೂರು ದಾಖಲಿಸಿಕೊಳ್ಳಲಾಯಿತು.

ಮಾರ್ಚ್‌ 26ರಂದು ಕಾಪು ಶಾಸಕ ಸುರೇಶ್‌ ಶೆಟ್ಟಿ ಶಿರ್ವ ಜಾರಂದಾಯ ದೇವಸ್ಥಾನದಲ್ಲಿ ಪ್ರಚಾರ ಸಭೆ ನಡೆಸಿ, ಮತದಾರರ ಮೇಲೆ ಪ್ರಭಾವ ಬೀರಿರುವುದು ಕಂಡುಬಂದಿದೆ ಎಂದು ಚುನಾವಣಾ ಅಧಿಕಾರಿಗಳು ಹೇಳಿದ್ದಾರೆ.

More articles

Latest article

Most read