ಚುನಾವಣಾ ಆಯೋಗ ಬಿಜೆಪಿಯ ‘ಚುನಾವಣಾ ಕಳ್ಳತನ’ ಶಾಖೆಯಾಗಿ ಬದಲಾಗಿದೆ: ರಾಹುಲ್‌ ವಾಗ್ದಾಳಿ

ನವದೆಹಲಿ: ಬಿಹಾರದಲ್ಲಿ ಚುನಾವಣಾ ಆಯೋಗ ಮತದಾರರ ಪಟ್ಟಿಯ ‘ವಿಶೇಷ ಸಮಗ್ರ ಪರಿಷ್ಕರಣೆ’ (SIR) ನಡೆಸುತ್ತಿದ್ದು, ಇದು ಅಲ್ಲಿನ ಮತದಾರರಿಗೆ ಮಾಡಿದ ವಂಚನೆಯಾಗಿದೆ ಮತ್ತು ಚುನಾವಣಾ ಆಯೋಗವು ಬಿಜೆಪಿ ಪರವಾಗಿ ವರ್ತಿಸುತ್ತಿರುವುದಕ್ಕೆ ಸಾಕ್ಷಿಯಾಗುದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಎಕ್ಸ್‌ನಲ್ಲಿ ರಾಹುಲ್  ಗಾಂಧಿ ಅವರು, ಸರ್ಕಾರಿ ಅಧಿಕಾರಿಗಳು ಮತದಾರರಿಗೆ ತಿಳಿಯದೆ ಮತದಾರರ ನಮೂನೆಗಳನ್ನು ಭರ್ತಿ ಮಾಡಿ ಸಹಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪತ್ರಕರ್ತರೊಬ್ಬರು ಪೋಸ್ಟ್ ಮಾಡಿದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಚುನಾವಣಾ ಆಯೋಗ ತಟಸ್ಥ ಸಂಸ್ಥೆಯಾಗಿ ಕಾರ್ಯನಿರ್ವಹಿಸಬೇಕು. ಬಿಜೆಪಿಯ ‘ಚುನಾವಣಾ ಕಳ್ಳತನ’ ಶಾಖೆಯಾಗಿ ಸಂಪೂರ್ಣವಾಗಿ ಬದಲಾಗಿರುವ ಅನುಮಾನವೂ ಇದೆ ಎಂದಿದ್ದಾರೆ.

ಬಿಹಾರದಲ್ಲಿ ಚುನಾವಣಾ ಆಯೋಗ ‘SIR’ ಹೆಸರಿನಲ್ಲಿ ಮತಗಳನ್ನು ಕದಿಯುವಾಗ ಸಿಕ್ಕಿಬಿದ್ದಿದೆ. ಕಳ್ಳತನ ಮಾಡುವುದೇ ಅವರ ಕೆಲಸವಾಗಿದೆ. ಅದಕ್ಕೆ ‘SIR’ ಅಂತ ಹೆಸರಿಡಲಾಗಿದೆ. ಅವುಗಳನ್ನು ಬಹಿರಂಗಪಡಿಸುವವರ ವಿರುದ್ಧ FIR ದಾಖಲಿಸಲಾಗುತ್ತಿದೆ. ಚುನಾವಣಾ ಆಯೋಗ ಇನ್ನೂ ‘ಚುನಾವಣಾ ಆಯೋಗ’ವೇ ಅಥವಾ ಅದು ಸಂಪೂರ್ಣವಾಗಿ ಬಿಜೆಪಿಯ ‘ಚುನಾವಣಾ ಕಳ್ಳತನ’ ಶಾಖೆಯಾಗಿದೆಯೇ? ಎಂದು  ರಾಹುಲ್ ವಾಗ್ದಾಳಿ ನಡೆಸಿದ್ದಾರೆ.

ಜುಲೈ 10 ರಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಹಾಗೂ ಜಾಯ್‌ಮಾಲ್ಯಾ ಬಾಗ್ಚಿ ಅವರಿದ್ದ ನ್ಯಾಯಪೀಠ ಚುನಾವಣಾ ಆಯೋಗಕ್ಕೆ ಬಿಹಾರದಲ್ಲಿ ಕೈಗೆತ್ತಿಕೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಮುಂದುವರಿಸಲು ಅನುಮತಿ ನೀಡಿದೆ. ಆದರೆ ಆಧಾರ್ ಕಾರ್ಡ್, ಪಡಿತರ ಚೀಟಿಗಳು ಮತ್ತು ಮತದಾರರ ಗುರುತಿನ ಪತ್ರಗಳನ್ನು (ಎಪಿಕ್) ಮತದಾರರ ಗುರುತನ್ನು ಸಾಬೀತುಪಡಿಸಲು ಕ್ರಮಬದ್ಧ ದಾಖಲೆಗಳನ್ನಾಗಿ ಪರಿಗಣಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವುದಕ್ಕೆ ಪರಿಗಣಿಸಲಾಗಿರುವ 11 ದಾಖಲೆಗಳ ಪಟ್ಟಿಯಲ್ಲಿ ಆಧಾರ್ ಕಾರ್ಡ್, ಎಪಿಕ್ ಮತ್ತು ಪಡಿತರ ಚೀಟಿಗಳನ್ನು ಪರಿಗಣಿಸದೇ ಇರುವುದಕ್ಕೆ ಸೂಕ್ತ ಕಾರಣಗಳನ್ನು ನೀಡುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿದೆ.

More articles

Latest article

Most read