ಚುನಾವಣಾ ಆಯೋಗ ಪಾರದರ್ಶಕವಾಗಿ ಕೆಲಸ ಮಾಡಬೇಕು: ಮಲ್ಲಿಕಾರ್ಜುನ ಖರ್ಗೆ ಆಗ್ರಹ

Most read

ನವದೆಹಲಿ: ಮತದಾರರ ವಿಶೇಷ ಪರಿಷ್ಕರಣೆ (ಎಸ್‌ಐಆರ್) ನಡೆಯುತ್ತಿರುವ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪಕ್ಷದ ಪದಾಧಿಕಾರಿಗಳ ಜತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆ ನಡೆಸಿದರು.

ದೆಹಲಿಯಲ್ಲಿ ನಡೆದ ಈ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗವು ಕೇಂದ್ರ ಬಿಜೆಪಿ ಸರ್ಕಾರದ ನಿರ್ದೇಶನದಂತೆ ಕೆಲಸ ಮಾಡುತ್ತಿದೆ ಎನ್ನುವುದು ಪದೇ ಪದೇ ಸಾಬೀತಾಗುತ್ತಿದೆ. ಎಸ್‌ಐಆರ್‌ ನಡೆಸುತ್ತಿರುವ ವಿಧಾನ ಕುರಿತು ಚುನಾವಣಾ ಆಯೋಗದ ನಡವಳಿಕೆ ಸಂಶಯಾಸ್ಪದವಾಗಿದೆ ಎಂದು ಆಪಾದಿಸಿದರು.

ಚುನಾವಣಾ ಆಯೋಗವು ಪಾರದರ್ಶಕವಾಗಿ ಕೆಲಸ ಮಾಡಬೇಕು. ತಾನು ಕೇಂದ್ರ ಬಿಜೆಪ ಸರ್ಕಾರದ ನೆರಳಿನಲ್ಲಿ ಕೆಲಸ ಮಾಡುತ್ತಿಲ್ಲ ಎಂಬುದನ್ನು ಸಾಬೀತುಪಡಿಸಬೇಕು ಮತ್ತು ಸಾಂವಿಧಾನಿಕ ನಿಷ್ಠೆಯನ್ನು ಪ್ರದರ್ಶಿಸಬೇಕು ಎಂದು ಅವರು ಆಗ್ರಹಪಡಿಸಿದರು.

ಮತದಾರರ ಪಟ್ಟಿಯನ್ನು ಸಮಗ್ರತೆಯನ್ನು ಕಾಪಾಡಲು ಕಾಂಗ್ರೆಸ್ ಪಕ್ಷವು ಬದ್ಧವಾಗಿದೆ. ಆದರೆ ಬಿಜೆಪಿಯು ಮತಕಳ್ಳತನಕ್ಕಾಗಿ ಎಸ್‌ಐಆರ್ ಪ್ರಕ್ರಿಯೆಯನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂದ ಅವರು ಪಕ್ಷದ ಕಾರ್ಯಕರ್ತರು ಎಸ್‌ ಐಆರ್‌ ಕುರಿತು ಜಾಗರೂಕತೆ ವಹಿಸಬೇಕು. ಪ್ರಜಾಪ್ರಭುತ್ವದ ರಕ್ಷಣೆಗೆ ಬದ್ಧರಾಗಿದ್ದು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ನಾಶಮಾಡಲು ಬಿಡಬಾರದು ಎಂದು ಕರೆ ನೀಡಿದರು.

More articles

Latest article