ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ-2024ರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪುಟ್ಟಣ್ಣ ಗೆಲುವು ಸಾಧಿಸಿದ್ದಾರೆ.ಈ ಮೂಲಕ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ತೀರ್ವ ಮುಖಭಂಗವಾಗಿದೆ.
ಮಂಗಳವಾರ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ-2024ರ ಮತ ಎಣಿಕೆ ನಡೆಯಿತು. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪುಟ್ಟಣ್ಣ 1506 ಮತಗಳ ಅಂತರದಲ್ಲಿ ಗೆಲುವು ಕಂಡರು.
ಮೈತ್ರಿ ಮಾಡಿಕೊಂಡ ಬಿಜೆಪಿ-ಜೆಡಿಎಸ್ ಈ ಚುನಾವಣೆ ಎದುರಿಸಿತ್ತು. ಬಿಜೆಪಿ ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿತ್ತು. ಮೈತ್ರಿಕೂಟದ ಅಭ್ಯರ್ಥಿಯಾಗಿ ಎ. ಪಿ. ರಂಗನಾಥ್ ಕಣಕ್ಕಿಳಿದಿದ್ದರು.
ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪ ಚುನಾವಣೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆ ವ್ಯಾಪ್ತಿಯ ಮತದಾರರು ಫೆ.16ರಂದು ಮತದಾನ ಮಾಡಿದ್ದರು. ಒಟ್ಟು 19,152 ಮತಗಳ ಪೈಕಿ 16,544 ಮಂದಿ (ಪುರುಷರು 6,504, ಮಹಿಳೆಯರು 10,040) ಮತ ಚಲಾಯಿಸಿದರು.
ಪುಟ್ಟಣ್ಣ 8,260 ಮತಗಳನ್ನು ಪಡೆಡು 1506 ಮತಗಳ ಅಂತರದಲ್ಲಿ ಗೆಲುವು ಕಂಡರೆ. ರಂಗನಾಥ್ 6,753 ಮತಗಳನ್ನು ಗಳಿಸಿ ಸೋತಿದ್ದಾರೆ.