ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆ; ಕಾಂಗ್ರೆಸ್‌ ಎರಡು, ಓರ್ವ ಮೈತ್ರಿ ಅಭ್ಯರ್ಥಿ ಗೆಲುವು

Most read

ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ (Teachers Constituency) ಕಾಂಗ್ರೆಸ್ ಅಭ್ಯರ್ಥಿಗಳು (Congress Candidates) ಗೆಲುವು ದಾಖಲಿಸಿದ್ದಾರೆ.

ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ರಾಮೋಜಿಗೌಡ 11,841 ಮೊದಲ ಪ್ರಾಶಸ್ತ್ಯ ಮತಗಳನ್ನು ಪಡೆದು ಗೆದ್ದರೆ. ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಡಿ.ಟಿ ಶ್ರೀನಿವಾಸ್ 11,700ಕ್ಕೂ ಅಧಿಕ ಪ್ರಾಶಸ್ತ್ಯ ಮತಗಳನ್ನು ಪಡೆದು ಗೆಲುವು ತಮ್ಮದಾಗಿಸಿಕೊಂಡಿದ್ದಾರೆ.

ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಧನಂಜಯ್ ಸರ್ಜಿ 37,627 ಮತಗಳನ್ನು ಪಡೆದು ಭರ್ಜರಿ ಗೆದ್ದಿದ್ದಾರೆ.

ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಘುಪತಿ ಭಟ್ 7,039 ಮತಗಳನ್ನ ಪಡೆದುಕೊಂಡರೇ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ 13,516 ಮತಗಳನ್ನ ಪಡೆದು ಸೋಲು ಕಂಡಿದ್ದಾರೆ.

ಅಭ್ಯರ್ಥಿಗಳ ಗೆಲುವನ್ನು ಕಾರ್ಯಕರ್ತರು ಪಟಾಕಿ ಸಿಡಿಸುವ ಮೂಲಕ ಸಂಭ್ರಮಿಸಿದ್ದಾರೆ.

More articles

Latest article