ಸಂಡೂರು ಕ್ಷೇತ್ರದ ಟಿಕೆಟ್ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ಅವರಿಗೆ: ಸಿಎಂ ಸಿದ್ದರಾಮಯ್ಯ

Most read

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಪೈಕಿ ಸಂಡೂರು ವಿಧಾನಸಭಾ ಕ್ಷೇತ್ರದ ಟಿಕೆಟ್​ ನಿರೀಕ್ಷೆಯಂತೆ ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣ ಅವರಿಗೆ ಸಿಗುವುದು ಪಕ್ಕಾ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾದೆ.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆ ಆಗಬಹುದು. ಇನ್ನು, ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​​ ಕಾಂಗ್ರೆಸ್​ ಸೇರುವ ಬಗ್ಗೆ, ಅವರ ಜೊತೆ ನಾನು ಮಾತನಾಡಿಲ್ಲ. ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದರೂ ಸ್ವಾಗತ ಎಂದು ಹೇಳಿದರು.

ಸಂಡೂರು ಕ್ಷೇತ್ರದಲ್ಲಿ ಸಂಸದ ಇ ತುಕಾರಾಂ ಪತ್ನಿ ಅನ್ನಪೂರ್ಣ ಅವರಿಗೆ ಟಿಕೆಟ್ ಕೊಡುತ್ತೇವೆ. ಉಳಿದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿ ಫೈನಲ್ ಮಾಡುತ್ತೇವೆ ಎಂದು ಹೇಳಿದ್ದಾರೆ.

More articles

Latest article