ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳಿಗೆ ಅ.23 ರಂದು ಚುನಾವಣೆ

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಅಕ್ಟೋಬರ್ 23 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 27 ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.

ಕೇಂದ್ರ ಚುನಾವಣಾ ಆಯೋಗವು ದ್ವೈವಾರ್ಷಿಕ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಕರ್ನಾಟಕದ ಹಾಲಿ ನಾಲ್ವರು ವಿಧಾನ ಪರಿಷತ್ ಸದಸ್ಯರ ಅಧಿಕಾರಾವಧಿಯು 2026ರ ನವೆಂಬರ್ 11ರಂದು ಮುಕ್ತಾಯಗೊಳ್ಳಲಿದ್ದು, ತೆರವಾಗಲಿರುವ ಈ ಸ್ಥಾನಗಳನ್ನು ಭರ್ತಿ ಮಾಡಲು ಚುನಾವಣೆ ನಡೆಸಲಾಗುತ್ತಿದೆ. ಈ ಕ್ಷೇತ್ರಗಳಲ್ಲಿ ಇಂದಿನಿಂದಲೇ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.

ನಿವೃತ್ತಿಯಾಗುತ್ತಿರುವ ಸದಸ್ಯರು ಮತ್ತು ಕ್ಷೇತ್ರಗಳ ವಿವರ

ಚಿದಾನಂದ ಎಂ. ಗೌಡ – ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರ

ಎಸ್.ವಿ. ಸಂಕನೂರ – ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರ

ಶಶೀಲ್ ಜಿ. ನಮೋಶಿ – ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ

ಪುಟ್ಟಣ್ಣ – ಬೆಂಗಳೂರು ಶಿಕ್ಷಕರ ಕ್ಷೇತ್ರ

More articles

Latest article

Most read