ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ತಿರುವನಂತಪುರಂ ಏರ್ಪೋರ್ಟ್ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿರುವ ಘಟನೆ ಕೇರಳದಲ್ಲಿ ವರದಿಯಾಗಿದೆ.
ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಕೇರಳದ ತಿರುವನಂತಪುರಂನಲ್ಲಿ ವಿಮಾನವನ್ನು ಲ್ಯಾಂಡ್ ಮಾಡಲಾಯ್ತು. ಬಾಂಬ್ ಬೆದರಿಕೆ ಬಂದ ನಂತರ ಸಂಪೂರ್ಣ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ.
ವಿಮಾನವು ಬೆಳಗ್ಗೆ 8 ಗಂಟೆಗೆ ನಿಲ್ದಾಣದಲ್ಲಿ ಇಳಿದಿದ್ದು, ವಿಮಾನವನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ವಿಮಾನದಲ್ಲಿ 135 ಪ್ರಯಾಣಿಕರಿದ್ದರು. ಪ್ರಯಾಣಿಕರನ್ನು ವಿಮಾನದಿಂದ ಸ್ಥಳಾಂತರಿಸಲಾಗಿದೆ. ಬಾಂಬ್ ಬೆದರಿಕೆಯ ಮೂಲದ ವಿವರಗಳನ್ನು ಮತ್ತು ಇತರ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.