Friday, December 6, 2024

ಬೆನ್ ಸ್ಟೋಕ್ ಹೋರಾಟದ ನಡುವೆಯೂ ಇಂಗ್ಲೆಂಡ್ 246ಕ್ಕೆ ಆಲ್ ಔಟ್

Most read

ಭಾರತದ ಸ್ಪಿನ್ ತ್ರಿವಳಿಗಳ ಮಾರಕ ಬೌಲಿಂಗ್ ಗರ ನಲುಗಿದ ಇಂಗ್ಲೆಂಡ್ ಬೆನ್ ಸ್ಟೋಕ್ಸ್ (70) ಹೋರಾಟದ ನಡುವೆಯೂ ಕೇವಲ 246 ರನ್ ಗಳಿಗೆ ಆಲ್ ಔಟ್ ಆಯಿತು.

ಹೈದರಾಬಾದ್‌ ನಲ್ಲಿ ಇಂದು ಆರಂಭವಾಗಿರುವ ಐದು ಟೆಸ್ಟ್‌ಗಳ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್‌ ಆಯ್ದುಕೊಂಡಿದ್ದು, ಸ್ಪಿನ್ ಮೋಡಿಗೆ ಸಿಲುಕಿ ಆಲ್ ಔಟ್ ಆಯಿತು.

ಇಂದು ಬೆಳಿಗ್ಗೆ ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ ಯಾವುದೇ ವಿಕೆಟ್ ನಷ್ಟವಿಲ್ಲದೆ 55ರನ್ ಗಳಿಸಿ ಉತ್ತಮ ಆರಂಭ ಪಡೆದಿತ್ತಾದರೂ ದಿಢೀರನೆ 60 ರನ್ ಆಗುವಷ್ಟರಲ್ಲಿ ಮೂರು ವಿಕೆಟ್ ಕಳೆದುಕೊಂಡಿತು. ರವಿಚಂದ್ರನ್ ಅಶ್ವಿನ್ ಎರಡು ಮತ್ತು ರವೀಂದ್ರ ಜಡೇಜಾ ಒಂದು ವಿಕೆಟ್ ಗಳಿಸಿದರು. ಈ ಸಂದರ್ಭದಲ್ಲಿ ಜೊತೆಯಾದ ಜಾ‌ನಿ ಬೇರ್ ಸ್ಟೋ ತಂಡ ಕುಸಿಯುವುದನ್ನು ತಪ್ಪಿಸಿದರು.

ಭೋಜನ ವಿರಾಮದ ವೇಳೆಗೆ ಮೂರು ವಿಕೆಟ್ ನಷ್ಟಕ್ಕೆ 108 ರನ್ ಗಳಿಸಿದ್ದ ಇಂಗ್ಲೆಂಡ್ ನಂತರ ಮತ್ತೆ ಕುಸಿತ ಕಂಡಿತು.

ರವಿಚಂದ್ರನ್ ಅಶ್ವಿನ್ 3, ರವೀಂದ್ರ ಜಡೇಜಾ 3 ಹಾಗು ಅಕ್ಷರ್ ಪಟೇಲ್ ಮತ್ತು ಜಸ್ಪೀತ್ ಬುಮ್ರಾ 2 ವಿಕೆಟ್ ಪಡೆದುಕೊಂಡರು.

ಇತ್ತೀಚಿನ ವರದಿಗಳ ಪ್ರಕಾರ, ಭಾರತ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ್ದು ವಿಕೆಟ್ ನಷ್ಟವಿಲ್ಲದೆ 20 ರನ್ ಗಳಿಸಿದೆ.

More articles

Latest article