ದೇವದಾಸಿ ಪದ್ದತಿ ನಿರ್ಮೂಲನೆಗೆ ಯೋಜನೆ; ಸಿಎಂ ಸಿದ್ದರಾಮಯ್ಯ

Most read

ಬೆಂಗಳೂರು: ರಾಜ್ಯಾದ್ಯಂತ ದೇವದಾಸಿಯರ ಸಮೀಕ್ಷೆ ಕಾರ್ಯವನ್ನು ಈಗಾಗಲೇ ಆರಂಭಿಸಲಾಗಿದ್ದು, ಸಮೀಕ್ಷೆ ಪೂರ್ಣಗೊಂಡ ಬಳಿಕ ದೇವದಾಸಿಯರ ಪುನರ್ವಸತಿಗೆ ಹಾಗೂ ಈ ಪಿಡುಗನ್ನು ಸಂಪೂರ್ಣವಾಗಿ ತೊಲಗಿಸಲು ಯೋಜನೆ ಜಾರಿಗೊಳಿಸಲಾಗುವುದು. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಅವರು ವಿಧಾನಸೌಧದಲ್ಲಿ ಇಂದು 2025-26 ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಾಗೃತ ಹಾಗೂ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಚಿವರಾದ ಹೆಚ್.ಕೆ.ಪಾಟೀಲ್, ಹೆಚ್.ಸಿ.ಮಹದೇವಪ್ಪ, ಆರ್.ಬಿ.ತಿಮ್ಮಾಪುರ  ಸೇರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಅಧಿಕಾರಿಗಳೊಂದಿಗೆ ಸಭೆ  ನಡೆಸಿದ ನಂತರ ಅವರು ಮಾತನಾಡಿದರು. ವಿಶೇಷ ಅನುದಾನ ನೀಡುವ ಬಗ್ಗೆಯೂ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಬಾಕಿಯಿರುವ ಬ್ಯಾಕ್‌ ಲಾಗ್‌ ಹುದ್ದೆಗಳ ನೇಮಕಾತಿ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಬ್ಯಾಕ್‌ಲಾಗ್‌ ಹುದ್ದೆ ಭರ್ತಿ ವಿಷಯದಲ್ಲಿ ಯಾವುದೇ ರಾಜಿ ಪ್ರಶ್ನೆಯೇ ಇಲ್ಲ. ಸರ್ಕಾರ ದಲಿತರ ಪರವಾಗಿದ್ದು, ದಲಿತರಿಗೆ ಸೂಕ್ತ ನ್ಯಾಯ ಒದಗಿಸಲು ಅಡ್ಡಗಾಲು ಹಾಕುವ ಅಧಿಕಾರಿಗಳ ವಿರುದ್ಧ  ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

More articles

Latest article