ಮುಸ್ಲಿಂ ಸಮುದಾಯವನ್ನು ನಡೆಸಿಕೊಂಡ ರೀತಿಗೆ ಬೇಸರ : ಹೈಕಮಾಂಡ್‌ಗೆ ಪತ್ರ

ಬೆಂಗಳೂರು : ದಾವಣಗೆರೆ ವಿಧಾನಸಭೆ ಉಪ ಚುನಾವಣೆ ಬಳಿಕ ಕಾಂಗ್ರೆಸ್‌ ಮುಸ್ಲಿಮರನ್ನು ನಡೆಸಿಕೊಳ್ಳುತ್ತಿರುವ ರೀತಿ ಸರಿಯಲ್ಲ ಎಂದು ವಿವಿಧ ಮುಸ್ಲಿಂ ಸಂಘಟನೆಗಳ ಮುಖಂಡರು  ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಎ ಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್,  ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಏನಿದೆ: ಕರ್ನಾಟಕದ ಕಾಂಗ್ರೆಸ್ ಸರಕಾರ ಹಾಗೂ ಪಕ್ಷ ರಾಜ್ಯದ ಮುಸ್ಲಿಂ ಸಮುದಾಯವನ್ನು ನಡೆಸಿಕೊಳ್ಳುತ್ತಿರುವ ರೀತಿಯಿಂದ ತೀವ್ರವಾಗಿ  ನೋವಾಗಿದೆ.

ದಾವಣಗೆರೆಯಲ್ಲಿ ಮುಸ್ಲಿಮರ ಮತಗಳು ಹೆಚ್ಚು ಇರುವ ಹಿನ್ನೆಲೆಯಲ್ಲಿ ಸಹಜವಾಗಿ ಮುಸ್ಲಿಮರಿಗೆ ಟಿಕೆಟ್‌ ಕೇಳಿದ್ದೇವು. ಇದರಲ್ಲಿ ಯಾವುದೇ ತಪ್ಪು ಇಲ್ಲ. ಆದರೆ ಮತದಾನ ಮುಗಿದ ಬಳಿಕ ಪಕ್ಷದ ಉನ್ನತ ನಾಯಕರು ನಮ್ಮ ಸಮುದಾಯದ ನಾಯಕರ ಮೇಲೆ ಕ್ರಮಕ್ಕೆ ಮುಂದಾಗಿರುವುದು ಸರಿಯಲ್ಲ. ಕಾಂಗ್ರೆಸ್ ಪಕ್ಷ ಹಾಗೂ ಸರಕಾರ ಈ ಬಗ್ಗೆ ಕೂಡಲೇ ಗಮನ ಹರಿಸಿ ಮುಸ್ಲಿಂ ಸಮುದಾಯದ ಭಾವನೆಗಳನ್ನು ಅರ್ಥ ಮಾಡಿಕೊಂಡು ತನ್ನ ತಪ್ಪುಗಳನ್ನು ತಿದ್ದಿಕೊಳ್ಳುತ್ತದೆ ಎಂದು ಆಶಿಸುತ್ತೇವೆ ಎಂದು ಪತ್ರ ಬರೆದಿದ್ದಾರೆ.

ಪತ್ರಕ್ಕೆ ಜಮಾಅತ್ ಎ ಅಹ್ಲೆ ಸುನ್ನತ್, ಕರ್ನಾಟಕದ ಅಧ್ಯಕ್ಷರಾದ ಮೌಲಾನಾ ಸೈಯದ್ ತನ್ವೀರ್ ಹಾಶ್ಮಿ, ಶಾಹೀನ್ ಸಮೂಹ ಶಿಕ್ಷಣ ಸಂಸ್ಥೆಗಳು, ಬೀದರ್ ಅಧ್ಯಕ್ಷರಾದ ಅಬ್ದುಲ್ ಖದೀರ್ ಸಾಹೇಬ್, ವೆಲ್ಫೇರ್ ಆಫ್ ಹ್ಯುಮಾನಿಟಿ ಫೌಂಡೇಶನ್, ಬೆಂಗಳೂರು ಅಧ್ಯಕ್ಷರಾದ ಮೌಲಾನಾ ಶಬ್ಬೀರ್ ಅಹ್ಮದ್ ನದ್ವಿ, ದಿ ಮುಸ್ಲಿಮ್ ಸೆಂಟ್ರಲ್ ಕಮಿಟಿ ಅಧ್ಯಕ್ಷರಾದ ಕೆ ಎಸ್ ಮೊಹಮ್ಮದ್ ಮಸೂದ್ ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಸಹಿ ಹಾಕಿದ್ದಾರೆ.

More articles

Latest article

Most read