ಡಿ. ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ; ಗೌರವ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Most read

ಬೆಂಗಳೂರು: ಹಿಂದುಳಿದ ವರ್ಗಗಳ ಹರಿಕಾರ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 110ನೇ ಜನ್ಮ ದಿನದ ಅಂಗವಾಗಿ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಅರಸು ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಾಲಾರ್ಪಣೆ ಮಾಡಿ, ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ನಂತರ ಅವರು ಸದ್ಭಾವನಾ ದಿನದ ಅಂಗವಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿದರು. ದೇವರಾಜು ಅವರ 110ನೇ ಜನ್ಮ ದಿನಾಚರಣೆ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ದೇವರಾಜ ಅರಸು ಅವರ ಚಾರಿತ್ರಿಕ ಫೋಟೋ ಪ್ರದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ ವೀಕ್ಷಿಸಿದರು.

More articles

Latest article