ಮಾಜಿ ಪ್ರಧಾನಿ ದೇವೇಗೌಡರು ಗುಣಮುಖ; ವಿಶ್ರಾಂತಿಗೆ ವೈದ್ಯರ ಸೂಚನೆ; ಭೇಟಿಗೆ ಆಗಮಿಸದಂತೆ ಮನವಿ

ಬೆಂಗಳೂರು: ನಗರದ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರವರು ಗುಣಮುಖರಾಗಿ ಇಂದು ಮನೆಗೆ ಮರಳಿದ್ದಾರೆ.

ವೈದ್ಯರ ಸೂಚನೆಯಂತೆ ಅವರಿಗೆ ಇನ್ನೂ 15 ದಿನ ವಿಶ್ರಾಂತಿ ಅಗತ್ಯವಿದೆ. ಹೀಗಾಗಿ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಭೇಟಿ ಮಾಡಲು ಅವರ ನಿವಾಸಕ್ಕೆ ದಯವಿಟ್ಟು ತೆರಳಬೇಡಿ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ. ವಿಶ್ರಾಂತಿ ಬಳಿಕ, ಗೌಡರು ಪಕ್ಷದ ಕೇಂದ್ರ ಕಚೇರಿ ಜೆ.ಪಿ. ಭವನಕ್ಕೆ ಖುದ್ದು  ಆಗಮಿಸಿ ಎಲ್ಲರನ್ನೂ ಭೇಟಿಯಾಗಲಿದ್ದಾರೆ ಎಂದೂ ಅವರು ತಿಳಿಸಿದ್ದಾರೆ.

ಅಕ್ಟೋಬರ್ 6 ರಂದು ಜ್ವರ ಹಾಗೂ ಮೂತ್ರ ಸೋಂಕಿನಿಂದ ದೇವೇಗೌಡರು ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು.  

More articles

Latest article

Most read