ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ಆರೋಗ್ಯ ಸ್ಥಿರವಾಗಿದೆ ಮತ್ತು ಅವರು ಉಲ್ಲಾಸದಿಂದ ಇದ್ದಾರೆ ಎಂದು ಅವರು ಚಿಕಿತ್ಸೆ ಪಡೆಯುತ್ತಿರುವ ಮಣಿಪಾಲ್ ಆಸ್ಪತ್ರೆ ಮಣಿಪಾಲ್ ಆಸ್ಪತ್ರೆ ಅಧ್ಯಕ್ಷ ಡಾ. ಎಚ್. ಸುದರ್ಶನ್ ಬಲ್ಲಾಳ್ ಅವರು ತಿಳಿಸಿದ್ದಾರೆ.
ಜ್ವರ ಮತ್ತು ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದ ದೇವೇಗೌಡರನ್ನು ಅಕ್ಟೋಬರ್ 6 ರಂದು ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇಂದು ಅವರನ್ನು ಆದಿಚುಂಚನಗಿರಿ ಮಠಾಧೀಶರಾದ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.