ಕೊಲೆ ಮಾಡಿದ ಮಹಿಳೆಗೆ ಶಿಕ್ಷೆಯಿಂದ ವಿನಾಯಿತಿ ನೀಡಿ: ರಾಷ್ಟ್ರಪತಿಗೆ ಎನ್‌ ಸಿಪಿ ನಾಯಕಿ ಪತ್ರ

Most read

ಮುಂಬೈ: ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ಗಮನದಲ್ಲಿಟ್ಟುಕೊಂಡು ಒಂದು ಕೊಲೆ ಮಾಡಿದ ಮಹಿಳೆಯರಿಗೆ ಶಿಕ್ಷೆಯಿಂದ ವಿನಾಯಿತಿ ನೀಡಬೇಕೆಂದು ಒತ್ತಾಯಿಸಿ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ ಸಿ ಪಿ) ಮಹಿಳಾ ವಿಭಾಗದ ಅಧ್ಯಕ್ಷೆ ರೋಹಿಣಿ ಖಡ್ಸೆ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿರುವ ರೋಹಿಣಿ, ಮಹಿಳೆಯರು ದಬ್ಬಾಳಿಕೆಯ ಮನಸ್ಥಿತಿ, ಅತ್ಯಾಚಾರಿ ಮನಸ್ಥಿತಿ ಮತ್ತು ನಿಷ್ಕ್ರಿಯ ಕಾನೂನು ಮತ್ತು ಸುವ್ಯವಸ್ಥೆಯ ಪ್ರವೃತ್ತಿಯನ್ನು ಕೊನೆಗಾಣಿಸಲು ಬಯಸುತ್ತಿದ್ದಾರೆ ಎಂದು ಪತ್ರದಲ್ಲಿ  ಉಲ್ಲೇಖಿಸಿದ್ದಾರೆ.

ಮುಂಬೈನಲ್ಲಿ ಇತ್ತೀಚೆಗೆ ನಡೆದ 12 ವರ್ಷದ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ವಿಚಾರ ಪ್ರಸ್ತಾಪಿಸಿರುವ ಅವರು ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಇದು ನಿದರ್ಶನವಾಗಿದೆ. ಹಾಗಾಗಿ ಒಂದು ಕೊಲೆ ಮಾಡಿದ ಮಹಿಳೆಯರಿಗೆ ಶಿಕ್ಷೆಯಿಂದ ವಿನಾಯಿತಿ ನೀಡುವಂತೆ ಎಲ್ಲಾ ಮಹಿಳೆಯರ ಪರವಾಗಿ ಒತ್ತಾಯಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಭಾರತವು ಮಹಿಳೆಯರಿಗೆ ಅತ್ಯಂತ ಅಸುರಕ್ಷಿತ ದೇಶವಾಗಿದೆ ಎಂದು ಹೇಳುವ ಸಮೀಕ್ಷಾ ವರದಿಯನ್ನು ಉಲ್ಲೇಖಿಸಿರುವ ಅವರು, ಅಪಹರಣ ಮತ್ತು ಕೌಟುಂಬಿಕ ಹಿಂಸಾಚಾರ ಸೇರಿದಂತೆ ಅನೇಕ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಾಧಿತರಾಗಿದ್ದಾರೆ ಎಂದು ಒತ್ತಿ ಹೇಳಿದ್ದಾರೆ.

More articles

Latest article