ಮತಗಟ್ಟೆ ಸಮೀಕ್ಷೆ; ಶಿಗ್ಗಾಂವಿಯಲ್ಲಿ ಬಿಜೆಪಿ ಗೆಲುವು

Most read

ಬೆಂಗಳೂರು: ಶಿಗ್ಗಾಂವಿ ಕ್ಷೇತ್ರ ಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿವೆ.  ಮತ ಎಣಿಕೆ ಶನಿವಾರ ನಡೆಯಲಿದೆ. P- MARQ ಸಮೀಕ್ಷೆ ಪ್ರಕಾರ ಶಿಗ್ಗಾಂವಿಯಲ್ಲಿ ಭರತ್ ಬೊಮ್ಮಾಯಿ ಚೊಚ್ಚಲ ಗೆಲುವು ಸಾಧಿಸಿ ವಿಧಾನಸೌಧ ಪ್ರವೇಶಿಸಲಿದ್ದಾರೆ. ಕನ್ನಡದ ಬಹುತೇಕ ಚಾನೆಲ್ ಗಳೂ ಇದೇ ಸಮೀಕ್ಷೆಯನ್ನು ಪುಷ್ಟಿಕರಿಸಿವೆ.

ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಗೆಲುವು ಸಾಧಿಸಲಿದ್ದಾರೆ ಎಂದು ಸಮೀಕ್ಷೆ ಹೇಳಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಅಹಮದ್ ಪಠಾಣ್ ಸ್ಪರ್ಧಿಸಿದ್ದಾರೆ. ಬಿಜೆಪಿ ಶೇ. 47, ಕಾಂಗ್ರೆಸ್ ಶೇ. 41 ರಷ್ಟು ಮತ ಗಳಿಸಲಿದೆ ಎಂದು ಸಮೀಕ್ಷೆ ತಿಳಿಸಿದೆ. ಭರತ್ ತಂದೆ ಸಂಸದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ  ಲೋಕಸಭೆಗೆ ಆಯ್ಕೆಯಾಗಿದ್ದರಿಂದ ಮರು ಚುನಾವಣೆ ನಡೆದಿತ್ತು.

ಇಲ್ಲಿ  1,21,443 ಪುರುಷ, 1,26,076 ಮಹಿಳಾ ಸೇರಿ 2,37,525 ಮತದಾರರಿದ್ದಾರೆ. 2023ರಲ್ಲಿ ಬಿಜೆಪಿಯ ಬಸವರಾಜ ಬೊಮ್ಮಾಯಿ 1,00,016 ಮತ ಗಳಿಸಿ ಭರ್ಜರಿ ಜಯ ಸಾಧಿಸಿದ್ದರು. ಮತ್ತು ಪಠಾಣ್ 64,038 ಮತ ಗಳಿಸಿದ್ದರು. ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆಯನ್ನು ವಿಳಂಬ ಮಾಡಿದ್ದು, ಅಭ್ಯರ್ಥಿ ಆಯ್ಕೆಯಲ್ಲಿ ಗೊಂದಲ ಉಂಟಾಗಿದ್ದು ಮತ್ತು ವಕ್ಫ್‌ ನೋಟಿಸ್‌ ಫಲಿತಾಂಶದ ಮೇಲೆ ಪ್ರಭಾವ ಬೀರುವುದರಲ್ಲಿ ಸಂಶಯವಿಲ್ಲ. ಇಲ್ಲಿ ಬಸವರಾಜ ಬೊಮ್ಮಾಯಿ ಅವರು ನಾಲ್ಕು ಬಾರಿ ಜಯಗಳಿಸಿದ್ದು ಕ್ಷೇತ್ರದ ಮೇಲೆ ಹಿಡಿತ ಸಾಧಿಸಿದ್ದಾರೆ. ಮೇಲಾಗಿ ಎಲ್ಲ ವರ್ಗಗಳ ಮತದಾರರೊಂದಿಗೂ ಉತ್ತಮ ಬಾಂಧವ್ಯ ಹೊಂದಿರುವುದು ಮಗನ ಗೆಲುವಿಗೆ ಸಹಕಾರಿಯಾಗಲಿದೆ. ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆಯಲ್ಲಿ ಎಡವಿದ್ದು ಬಹಿರಂಗ ಸತ್ಯ. ಪಠಾಣ್‌ ಅವರಿಗೆ ಕೊನೆಯ ಗಳಿಗೆಯಲ್ಲಿ ಟಿಕೆಟ್‌ ನೀಡಿದ್ದು ಹಿನ್ನೆಡೆಯಾಗಲಿದೆ ಎಂದು ಸ್ಥಳೀಯ ಮುಖಂಡರು ಅಭಿಪ್ರಾಯಪಡುತ್ತಾರೆ.

More articles

Latest article