ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿ ವಿಸ್ತರಣೆ

Most read

ಕರ್ನಾಟಕ ಸರ್ಕಾರ ಸರ್ಕಾರಿ ನೌಕರರ ಬೇಡಿಕೆಯಂತೆ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ಆರಂಭಿಸಿದ್ದು, ಈ ಪ್ರಕ್ರಿಯೆ ಜುಲೈ 17ಕ್ಕೆ ಅಂತ್ಯಗೊಂಡಿತ್ತು. ಇದೀಗ ವರ್ಗಾವಣೆ ಅವಧಿಯನ್ನು ವಿಸ್ತರಣೆ ಮಾಡಿದೆ.

ಸರ್ಕಾರಿ ನೌಕರರ ಪ್ರಸಕ್ತ ಸಾಲಿನ ವರ್ಗಾವಣೆ ಅವಧಿಯನ್ನು ಜುಲೈ 31 ರವರೆಗೆ ವಿಸ್ತರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. 2024ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಷರತ್ತಿಗೆ ಒಳಪಟ್ಟು ಜುಲೈ 9 ರವರೆಗೆ ನಡೆಸಲು ಆಯಾ ಇಲಾಖೆ ಸಚಿವರಿಗೆ ಅಧಿಕಾರ ನೀಡಿ ಜೂನ್ 25ರಂದು ರಾಜ್ಯ ಸರ್ಕಾರ ಆದೇಶಿಸಿದೆ.

ನೌಕರರ ವರ್ಗಾವಣೆ ದಿನಾಂಕ ವಿಸ್ತರಿಸಬೇಕೆಂದು ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಜುಲೈ 15ಕ್ಕೆ ವಿಸ್ತರಿಸಿ ಆದೇಶ ಹೊರಡಿಸಲಾಗಿತ್ತು. ಇದೀಗ ಎರಡನೇ ಬಾರಿಗೆ ಪ್ರಸಕ್ತ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶಿಸಿದೆ.

ಸರ್ಕಾರಿ ಆದೇಶದಲ್ಲಿ ಸದರಿ ವರ್ಗಾವಣೆ ಅವಧಿಯನ್ನು ದಿನಾಂಕ: 15.07.2024 ರವರೆಗೆ ವಿಸ್ತರಿಸಲಾಗಿತ್ತು. ಮುಂದುವರೆದು, ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸುವುದು ಅವಶ್ಯವೆಂದು ಸರ್ಕಾರವು ಪರಿಗಣಿಸಿ ಈ ಅವಧಿಯನ್ನು ವಿಸ್ತರಿಸಿದೆ.

More articles

Latest article